ಚಿತ್ರದುರ್ಗ : ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ – ಮೂವರು ಸ್ಥಳದಲ್ಲೇ ದುರ್ಮರಣ !

Advertisement

ಚಿತ್ರದುರ್ಗ, ಆ. 21 : ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ಉರುಳಿ ಬಿದ್ದು, ಭೀಕರ ಅಪಘಾತ ಸಂಭವಿಸಿದೆ.

Advertisement

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶುಕ್ರವಾರ(ಆ.21) ನಡೆದಿದೆ.

Advertisement

ಮೃತರನ್ನು ಬಸ್ ಚಾಲಕ, ನಿರ್ವಾಹಕ ಹಾಗೂ ಓರ್ವ ನರ್ಸಿಂಗ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆಯಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಳೆದ ಆಗಸ್ಟ್ 16ರಂದು ಗೋವಾ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಚಾಲಕನಿಗೆ ಆವರಿಸಿದ್ದ ನಿದ್ರೆಯ ಮಂಪರೇ ಈ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಂಜಿತ್ ಕುಮಾರ್ ಬಂಡಾರೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ