ಬೆಂಗಳೂರು : ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಜ. 31 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಜಾಹೀರಾತನ್ನು ನಿರ್ಬಂಧ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

Advertisement

ಶುಕ್ರವಾರ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್‌ಗಳಲ್ಲಿ/ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಬೇಕು. ನಿಗದಿತ ಸಮಯದೊಳಗೆ ಇಂತಹ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.