ಮಂಗಳೂರು : ಬಸ್ ನಲ್ಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಸ್ ಕಂಡಕ್ಟರ್ ಇರ್ಫಾನ್ ದಸ್ತಗಿರಿ !

Advertisement

ಮಂಗಳೂರು, ಜು. 11 : ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಸ್ ನಿರ್ವಾಹನೊಬ್ಬನನ್ನು ಪೊಲೀಸರು ದಸ್ತಗಿರಿ ಮಾಡಿರುವ ಘಟನೆ ವರದಿಯಾಗಿದೆ.

Advertisement

ಆರೋಪಿಯನ್ನು ಉಪ್ಪಿನಂಗಡಿ, ಕರ್ವೇಲ್ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಈತ ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್ಸೊಂದರಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

Advertisement

ಆರೋಪಿಯು ಮಂಗಳೂರು – ವಿಟ್ಲ ಮಾರ್ಗದ ಬಸ್ ಕಂಡಕ್ಟರ್ ಆಗಿದ್ದು, ಜು.9 ರಂದು ಸಂಜೆ ಸುಮಾರು 5:00 ಗಂಟೆಗೆ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿ, ಅಶ್ಲೀಲ ಸನ್ನೆಗಳನ್ನು ಮಾಡಿದ್ದಾನೆ. ಜೊತೆಗೆ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಜು. 10 ರಂದು ಪೊಲೀಸರು ದಸ್ತಗಿರಿ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ