ಮಡಿಕೇರಿ : ರಸ್ತೆ ಮಧ್ಯೆಯೇ ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರಿ ಅನಾಹುತ

ಮಡಿಕೇರಿ, ಡಿ. 15 : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿ, ಮಗಡಿಪಾರೆ ಆಂಜನೇಯ ದೇವಾಲಯದ ಹತ್ತಿರ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್‌ ಆಗಿದ್ದು, ಮೈಸೂರಿನಿಂದ ಪ್ರವಾಸಿಗರನ್ನು ಇಳಿಸಿದ ನಂತರ ವಾಪಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ.

Advertisement

ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಪ್ರವಾಸಿಗರು ಬಸ್‌ನಲ್ಲಿ ಇದ್ದಿದ್ದರೆ, ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ತೆರಳಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಹೊತ್ತಿ ಉರಿದ ಪರಿಣಾಮ, ಕೊಡಗು-ಕೇರಳ ಮಾರ್ಗದ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿತ್ತು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.