ಉಡುಪಿ : ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ – ತಪ್ಪಿದ ಭಾರೀ ಅನಾಹುತ

ಉಡುಪಿ, ಸೆ. 25 : ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾದ ಘಟನೆ ಉಡುಪಿ ಸಮೀಪದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂದೂರುಕಟ್ಟೆಯ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಸಿಬ್ಬಂದಿ ಸ್ಪಂದಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ತಪ್ಪಿದ ಭಾರೀ ಅನಾಹುತ: ಉರಿಯುತ್ತಿದ್ದ ಬಸ್ಸಿನ ಪಕ್ಕದಲ್ಲೇ ಇನ್ನೂ ಎರಡು ಬಸ್ಸುಗಳು ಹಾಗೂ ಒಂದು ಟೆಂಪೋವನ್ನು ನಿಲ್ಲಿಸಲಾಗಿತ್ತು. ಪಕ್ಕದಲ್ಲೇ ಪೆಟ್ರೋಲ್ ಪಂಪ್ ಇದ್ದಿದ್ದರಿಂದ ಬೆಂಕಿ ಬೇರೆಡೆಗೆ ವ್ಯಾಪಿಸಿದ್ದರೆ ಭಾರೀ ಸ್ಫೋಟ ಸಂಭವಿಸುವ ಸಾಧ್ಯತೆಯಿತ್ತು. ಆದರೆ ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ದೊಡ್ಡ ಗಂಡಾಂತರ ತಪ್ಪಿದೆ.

ಬಸ್ ಮತ್ತು ಪೆಟ್ರೋಲ್ ಪಂಪ್ ಒಂದೇ ವ್ಯಕ್ತಿಯ ಒಡೆತನದ್ದಾಗಿದ್ದು, ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ಬಂಟ್ವಾಳ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ದೇಹದಾರ್ಢ್ಯ ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಶ್ರೀ ಅರುಣ್ ಕುಮಾರ್ ಗಟ್ಟಿ ಆಯ್ಕೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : 10 ವರ್ಷ ಪ್ರೀತಿಸಿ ಮದುವೆಯಾದವಳಿಗೆ ಮೋಸ – ಎರಡು ಮಕ್ಕಳ ತಾಯಿಯನ್ನ ಗುಟ್ಟಾಗಿ ಮದುವೆಯಾದ ಸದಾಕತ್ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ!