ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಬಸ್‌ ಪಲ್ಟಿಯಾಗಿ 20 ಕ್ಕಿಂತಲೂ ಅಧಿಕ ಮಂದಿಗೆ ಗಾಯ

ಬೆಳ್ತಂಗಡಿ, ಏ. 26 : ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಬಸ್‌ ಪಲ್ಟಿಯಾಗಿ 20 ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಪ್ರವಾಸಿಗರಿದ್ದ ಖಾಸಗಿ ಬಸ್ ಉಜಿರೆಯಿಂದ ಕೊಟ್ಟಿಗೆಹಾರ ಕಡೆ ಚಲಿಸುತಿದ್ದ ವೇಳೆ ಚಾರ್ಮಾಡಿ ಘಾಟ್ ರಸ್ತೆಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಬಸ್‌ ನಲ್ಲಿದ್ದ ಇಪ್ಪತ್ತಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಗಾಯಗಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಗಂಭೀರ ಗಾಯಗೊಂಡ ಕೆಲವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾಹಿತಿಯಂತೆ ತುಮಕೂರು ಜಿಲ್ಲೆಯ ಪಾವಗಡದವರು ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.