ಉಡುಪಿ : ಫುಟ್‌ಬೋರ್ಡ್‌ನಲ್ಲಿ ನಿಂತು ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ಖಾಸಗಿ ಬಸ್ ವಿರುದ್ಧ ಪ್ರಕರಣ ದಾಖಲು

Advertisement

ಉಡುಪಿ, ಆ. 15 : ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಅಪಾಯಕಾರಿ ರೀತಿಯಲ್ಲಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಆಗಸ್ಟ್ 14ರಂದು ಖಾಸಗಿ ಎಕ್ಸ್‌ಪ್ರೆಸ್ ಬಸ್‌ವೊಂದು ಕಾಪುವಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಚಾಲಕ ಹಾಗೂ ನಿರ್ವಾಹಕರು ನಿಯಮಗಳು ಮತ್ತು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.

Advertisement

ಇದರೊಂದಿಗೆ, ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಬಸ್‌ನ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪ್ರಯಾಣಿಕರ ಸುರಕ್ಷತೆಯನ್ನು ಕಡೆಗಣಿಸಿ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಾಲನೆ ಮಾಡಲಾಗಿದ್ದು, ಇದರಿಂದ ಪ್ರಯಾಣಿಕರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ ಕಾಪು ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ