ಬಂಟ್ವಾಳ : ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವು

Advertisement

ಬಂಟ್ವಾಳ, ಮಾ. 14 : ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

Advertisement

ರಾತ್ರಿ ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ ನೀಡಿದೆ. ಛಾಯಾಗ್ರಾಹಕ ಸಂಘದ ಬಂಟ್ವಾಳ ವಲಯದ ಸಕ್ರೀಯ ಸದಸ್ಯನಾಗಿದ್ದ ಇವರು ಅತ್ಯುತ್ತಮ ವಿಡಿಯೋಗ್ರಾಫರ್ ನಾಗಿದ್ದ.
ರಕ್ಷಿತ್ ಅವರ ಮಗಳ 10 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮ ನಾಳೆ ಮಾ.15 ರಂದು ಮನೆಯಲ್ಲಿ ನಡೆಯಲು ತಯಾರಿಗಳು ಮಾಡಲಾಗಿತ್ತು.

Advertisement

ಮಗಳ ಹುಟ್ಟು ಹಬ್ಬದ ಸಂಭ್ರಮದ ಮನೆಯೀಗ ತಂದೆಯ ಸಾವಿನಿಂದ ಮೌನವಾಗಿ ರೋಧಿಸುತ್ತಿದೆ. ರಕ್ಷಿತ್ ಸಹೋದರ ರಂಜಿತ್ ಅವರು ಕೂಡ ಸುಮಾರು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ. ಅತ್ಯಂತ ಬಡ ಕುಟುಂಬ ಇದೀಗ ಮನೆಯ ಆಧಾರಸ್ತಂಭವಿಲ್ಲದೆ ಕಂಗಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ