ಬಂಟ್ವಾಳ : ಫರಂಗೀಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ ಯತ್ನ – ಪ್ರಕರಣ ದಾಖಲು

Advertisement

ಬಂಟ್ವಾಳ, ಜು. 13 : ಫರಂಗೀಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೋಮವಾರ ಕಳ್ಳತನಕ್ಕೆ ಯತ್ನಿಸಿದ್ದು, ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಸೋಮವಾರ ರಾತ್ರಿ ವೇಳೆ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿದ್ದಾರೆನ್ನಲಾಗಿದೆ.

Advertisement

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚು ತಂಡ, ಸೋಕೋ ತಂಡಗಳು ಭೇಟಿ ನೀಡಿವೆ. ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಹೆಚ್ಚಿನ ಪರಿಶೀಲನೆಯ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ