ಬೆಳ್ತಂಗಡಿ : ವಾರದ 6 ದಿನ ಕ್ಯಾಂಟೀನ್ – ಆದಿತ್ಯವಾರ ಬೆಡ್ ರೂಮ್ – ಕ್ಯಾಂಟೀನ್ ಒಳಗಡೆಯೇ ಅಕ್ರಮ ವೇಶ್ಯಾವಟಿಕೆ ದಂಧೆ ಬಯಲು : ಪೊಲೀಸ್ ದಾಳಿ !

ಬೆಳ್ತಂಗಡಿ, ಮೇ 11 : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು.

ಈ ಕ್ಯಾಂಟಿನ್ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ ಸುಂದ‌ರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯನ್ನು ಕರೆದುಕೊಂಡು ಬಂದು ಹಣ ಮಾಡುವ ಉದ್ದೇಶದಿಂದ ಗಿರಾಕಿಗಳನ್ನು ಕರೆಸಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದರು.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.10 ರಂದು ಸಂಜೆ 5 ಗಂಟೆಗೆ ಕ್ಯಾಂಟಿನ್ ಮೇಲೆ ದಾಳಿ ಮಾಡಿದಾಗ ವೇಶ್ಯಾವಟಿಕೆ ಪ್ರಕರಣ ಬೆಳಕಿಗೆ ಬಂದಿದೆ.

ಕ್ಯಾಂಟಿನ್ ಒಳಗಡೆ ಮಾಲೀಕ ಸುಂದ‌ರ್ ಶೆಟ್ಟಿ(55), ಗಿರಾಕಿಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಚಾಲಕ ವೃತ್ತಿ ಮಾಡುವ ಹುಸ್ಮಾನ್(38), ಬೆಳ್ತಂಗಡಿ ತಾಲೂಕಿನ ತಣ್ಣಿರುಪಂತದ ಗ್ರಾಮದ ಕಲ್ಲೇರಿ ನಿವಾಸಿ ಹೈದಾರ್(45) ಮೂವರನ್ನು ಬಂಧಿಸಿದ್ದಾರೆ.

29 ವರ್ಷದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಮೊಬೈಲ್ ಫೋನ್, 5 ಸಾವಿರ ಹಣ, ನಿರೋಧ ಗಳು ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟ‌ರ್ ಸಿಕಂದ‌ರ್ ಪಾಷ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.