ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Advertisement

ತಿರುವನಂತಪುರಂ, ಸೆ. 05 : ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು(Car) ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳದ ತ್ರಿಶ್ಯೂರು ಜಿಲ್ಲೆಯಲ್ಲಿ ನಡೆದಿದೆ.

ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿ.ಎಸ್.ಎಂ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಸೆಂಟರ್‌ನ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಸುಮಾರಿಗೆ ಬಂದ ತಮಿಳುನಾಡು ನೋಂದಣಿಯ ಕಾರು (TN 59 DW 8299) ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಸಿಬ್ಬಂದಿ ಕಾರಿನ ಬಿಡಿಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದ ಎಂಟೂ ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಕೈಪಮಂಗಲಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ