ಉಪ್ಪಿನಂಗಡಿ : ನಿಯಂತ್ರಣ ತಪ್ಪಿ 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು – ಪ್ರಯಾಣಿಕರು ಪಾರಾಗಿದ್ದೇ ಪವಾಡ !

ಉಪ್ಪಿನಂಗಡಿ, ಮೇ. 23 : ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ನಡೆದಿದೆ.

Advertisement

ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ ನದಿ ಬದಿಯ ಆಳವಾದ ಕಂದಕಕ್ಕೆ ಬಿದ್ದಿದೆ.

ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅಲ್ಪಸ್ವಲ್ಪ ತರಚು ಗಾಯಗಳೊಂದಿಗೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪರಿಚಿತರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.