ಬಂಟ್ವಾಳ : ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಕಾರು – 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ

Advertisement

ಬಂಟ್ವಾಳ, ಏ. 02 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

Advertisement

ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

Advertisement

ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು ಹೋಗಿ ಬಳಿಕ ಪಲ್ಟಿಯಾಗಿದೆ. ಕಾರಿನಲ್ಲಿ ಸುಮಾರು 4 ಮಂದಿ ವಿದ್ಯಾರ್ಥಿನಿಯರು ಹಾಗೂ 3 ಮಂದಿ ವಿದ್ಯಾರ್ಥಿಗಳು ಇದ್ದರು. ಪಲ್ಟಿಯಾದ ಕಾರನ್ನು ಎತ್ತಿ ಅವರನ್ನೆಲ್ಲ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ