ಬಂಟ್ವಾಳ : ಕಾರು ಡಿಕ್ಕಿ – ಕೆಲಸ ಮುಗಿಸಿ ಮನೆ ಕಡೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು !

ಬಂಟ್ವಾಳ, ಅ. 01 : ಬಸ್ ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬಾಳ್ತಿಲ ನಿವಾಸಿ ಹರೀಶ್ ನಾಯ್ಕ್ (46) ಮೃತಪಟ್ಟವರು.

ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಅವರು, ಸಂಜೆ ಕೆಲಸ ಮುಗಿಸಿ ಕಲ್ಲಡ್ಕ ಕಡೆಯಿಂದ ಬಸ್ ನಲ್ಲಿ ಮನೆಗೆ ತೆರಳುತ್ತಿದ್ದರು. ದಾಸಕೋಡಿಯಲ್ಲಿ ಬಸ್ ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಹರೀಶ್ ನಾಯ್ಕ್ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಹಾಗೂ ಕಾರಿನ ಚಾಲಕನ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು