ಮೆಲ್ಕಾರ್ : ಕಾರು ಡಿವೈಡರ್ ಗೆ ಢಿಕ್ಕಿ – ಕಾರಿನಲ್ಲಿದ್ದ ನಾಲ್ವರು ಗಂಭೀರ

ಮೆಲ್ಕಾರ್ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Advertisement

ಅಪಘಾತದಿಂದ ಕಾರು ಚಾಲಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ, ಕಬಕ ನಿವಾಸಿ ಸತೀಶ್ ರಾವ್, ಅವರ ಪತ್ನಿ ವೇದವಳ್ಳಿ, ಅದರ ಮೊಮ್ಮಗ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ 3ನೇ ತರಗತಿಯ ವಿದ್ಯಾರ್ಥಿ ಹಾಗೂ ಪಡುಮಲೆ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಉದಯ ಕುಮಾರ್ ಪಡುಮಲೆ ಗಾಯಗೊಂಡಿದ್ದು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ಮಂಗಳೂರಿಗೆ ತೆರಳಿದ್ದ ಅವರು ಪುತ್ತೂರಿಗೆ ಹಿಂತಿರುಗಿ ಬರುತ್ತಿದ್ದ ವೇಳೆ ಮೆಲ್ಕಾರ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಅವರನ್ನು ಬಿ.ಸಿ ರೋಡ್ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.