ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಮೂಡುಬಿದಿರೆ, ಜೂ. 23 : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ ಕೋಟೆಕಾರಿನ ಮಸೂದ್ ಎಂಬವರು ಈ ಕಾರನ್ನು ಇತ್ತೀಚೆಗೆ ಖರೀದಿಸಿದ್ದರು. ಮಸೂದ್ ಅವರು ತಮ್ಮ ಕುಟುಂಬದೊಂದಿಗೆ ಮೂಡುಬಿದಿರೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಾಹನವು ಹಳೆ ಪುರಸಭೆ ಕಟ್ಟಡದ ಬಳಿ ತಲುಪುತ್ತಿದ್ದಂತೆ, ಕಾರಿನಿಂದ ಹೊಗೆ ಬರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣವೇ ಕಾರನ್ನು ನಿಲ್ಲಿಸಿ, ಮಹಿಳೆಯರು ಮತ್ತು ಮಕ್ಕಳನ್ನು ಹೊರಕ್ಕೆ ಕರೆತಂದರು. ಕೆಲವೇ ಕ್ಷಣಗಳಲ್ಲಿ ಕಾರು ದಗದಗನೆ ಹೊತ್ತಿ ಉರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !