ಕಾವಳಕಟ್ಟೆ : ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರೆ ಮೃತಪಟ್ಟಿರುವ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19ರಂದು ಸಂಭವಿಸಿದೆ.

ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಕೂಟರ್ ಇನ್ನೋರ್ವ ಸವಾರೆ, ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಮಂಗಳೂರು ಕಾಲೇಜಿನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ.


