ಬೆಂಗಳೂರು : “ಸೇಫ್ ಸಿಟಿ” ಯೋಜನೆಯ ಸಿಸಿಟಿವಿ ಕ್ಯಾಮೆರಾಗಳಿಗೇ ಇಲ್ಲ ಭದ್ರತೆ – ಬ್ಯಾಟರಿಗಳಿಗೇ ಕನ್ನ !

ಬೆಂಗಳೂರು, ಮೇ 19 : ಮಹಿಳೆಯರ ಸುರಕ್ಷತೆಗೆ ನಗರದಾದ್ಯಂತ ಅಳವಡಿಸಲಾಗಿರುವ ‘ಸೇಫ್ ಸಿಟಿ’ ಯೋಜನೆಯ ಸಿಸಿಟಿವಿ ಕ್ಯಾಮೆರಾಗಳಿಗೆ ಸಂಪರ್ಕಿಸಲಾದ ಬ್ಯಾಟರಿಗಳನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿದ್ದ ಸಿಸಿಟಿವಿ ಜಂಕ್ಷನ್ ಬಾಕ್ಸ್‌ಗಳೊಳಗಿನ ಎರಡು ಬ್ಯಾಟರಿಗಳನ್ನು ಮೇ 16ರಂದು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Advertisement

ಮಹಿಳೆಯರ ಸುರಕ್ಷತೆ ಮತ್ತು ನಗರದಲ್ಲಿ ನಿಗಾವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ‘ಸೇಫ್ ಸಿಟಿ’ ಯೋಜನೆಯಡಿ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕ್ಯಾಮೆರಾಗಳು ನಿರಂತರವಾಗಿ ಕಾರ್ಯನಿರ್ವಹಿಸಲು ಜಂಕ್ಷನ್ ಬಾಕ್ಸ್‌ಗಳಲ್ಲಿ ಬ್ಯಾಟರಿಗಳನ್ನು ಇರಿಸಲಾಗಿತ್ತು. ಪೊಲೀಸರ ಪ್ರಕಾರ, ಕಳ್ಳರು ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿದ್ದ ಎರಡು ಜಂಕ್ಷನ್ ಬಾಕ್ಸ್‌ಗಳನ್ನು ಗುರಿಯಾಗಿಸಿಕೊಂಡು ಅವುಗಳೊಳಗಿನ ಬ್ಯಾಟರಿಗಳನ್ನು ಕದ್ದೊಯ್ದಿದ್ದಾರೆ. ಈ ಕುರಿತು ಸರ್ವೆಲೆನ್ಸ್ ವ್ಯವಸ್ಥೆಯ ನಿರ್ವಹಣೆಯ ಹೊಣೆ ಹೊತ್ತಿರುವ ಹನಿವೆಲ್ ಕಂಪನಿಯ ಯೋಜನಾ ನಿರ್ದೇಶಕ ರಾಜೀವ್ ನಾಯ್ಕರ್ ದೂರು ನೀಡಿದ್ದಾರೆ. ಕಳುವಾದ ಬ್ಯಾಟರಿಗಳ ಮೌಲ್ಯ ಸುಮಾರು 46,000 ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಗುರುತಿಸಿ ಬಂಧಿಸಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಏನಿದು ಸೇಫ್ ಸಿಟಿ ಪ್ರಾಜೆಕ್ಟ್?

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ವತಿಯಿಂದ ನಿರ್ಭಯಾ ನಿಧಿಯ ಅಡಿಯಲ್ಲಿ ಜಾರಿಗೆ ತರಲಾದ ಪ್ರಮುಖ ಮಹಿಳಾ ಸುರಕ್ಷತಾ ಯೋಜನೆಗಳ ಪೈಕಿ ಸೇಫ್ ಸಿಟಿ ಪ್ರಾಜೆಕ್ಟ್ ಕೂಡ ಒಂದು. ದೇಶದ ಪ್ರಮುಖ ಮಹಾನಗರಗಳಲ್ಲಿ ಅಪರಾಧಗಳನ್ನು ತಡೆಗಟ್ಟಲು ಮತ್ತು ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಈ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ವ್ವವಸ್ಥೆಯನ್ನು ಅಳವಡಿಸಲಾಗುತ್ತದೆ. ಯೋಜನೆಯಡಿ ಬೆಂಗಳೂರು ನಗರಾದ್ಯಂತ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾವಿರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.