ಉಪ್ಪಿನಂಗಡಿ : ಬಸ್ ಚಾಲನೆಯ ವೇಳೆ ಚಾಲಕನಿಗೆ ಎದೆನೋವು – ಪ್ರಯಾಣಿಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಪ್ಪಿನಂಗಡಿ, ಡಿ. 26 : ಬಸ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿದ ಘಟನೆ ವರದಿಯಾಗಿದೆ. ಬಸ್ ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್‌ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ತಕ್ಷಣವೇ ಚಾಲಕನತ್ತ ದೌಡಾಯಿಸಿ ಚಲಿಸುತ್ತಿದ್ದ ಬಸ್ ಅನ್ನು ನಿಧಾನಕ್ಕೆ ಹತೋಟಿಗೆ ತಂದು ರಸ್ತೆ ಬದಿಗೆ ನಿಲ್ಲಿಸಿದರು. ಈ ಮೂಲಕ ಸಂಭವನೀಯ ಅಪಾಯವೊಂದು ತಪ್ಪಿದಂತಾಗಿದೆ. ಬಳಿಕ ಸಾರಿಗೆ ನಿಯಂತ್ರಕರ ಸಹಕಾರದಿಂದ ಬಸ್ ಅನ್ನು ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ತಂದಿಡಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ : ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

⚠️ Contents are protected on this website.