ಚಾರ್ಮಾಡಿ : ಘಾಟಿಯಲ್ಲಿ ರಸ್ತೆಗೆ ಕುಸಿದು ಬಿದ್ದ ಬಂಡೆ ಕಲ್ಲುಗಳು – ತಪ್ಪಿದ ಅನಾಹುತ !

ಚಾರ್ಮಾಡಿ, ಜೂ. 12 : ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಬಂಡೆಯೊಂದು ಕುಸಿದು ರಸ್ತೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆ ಕುಸಿದು ರಸ್ತೆಗೆ ಬಿದ್ದಿದೆ ಎನ್ನಲಾಗಿದೆ. ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ ಭೂಮಿಯ ತೇವಾಂಶ ಹೆಚ್ಚಾದ ಕಾರಣದಿಂದ ಬಂಡೆ ಕುಸಿದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು, ಮಳೆಗಾಲದಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರಕ್ಕೆ ಅಲ್ಪ-ಸ್ವಲ್ಪ ತೊಡಕಾಗುವುದರಿಂದ ಪ್ರಯಾಣಿಕರು ಹೆಚ್ಚಿನ ಜಾಗೃತೆ ವಹಿಸಬೇಕಾಗಿದೆ. ಅಲ್ಲದೆ, ಕಾಡಾನೆ – ಚಿರತೆಯೂ ಘಾಟ್ ರಸ್ತೆ ಭಾಗದಲ್ಲಿ ಬೀಡು ಬಿಟ್ಟಿರುವುದರಿಂದ ಅಲ್ಲಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆಯೂ ಕೂಡಾ ಎಚ್ಚರ ವಹಿಸುವುದು ಅನಿವಾರ್ಯ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.