ಬಂಟ್ವಾಳ, ಜು. 28 : ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜುಲೈ 16 ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಚೇತರಿಸಿಕೊಂಡಿದ್ದು ನಂತರ ಪೊಲೀಸರು ತಮ್ಮ ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಹತ್ಯೆ ನಡೆದ ಬಳಿಕ ಆತ್ಮಹತ್ಯೆಗೆ ಯತ್ನ ಮಾಡಿದ್ದ ಚೇತನ್, ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದರಿಂದ ಮೊದಲು ಬಂಟ್ವಾಳ ಸರಕಾರಿ ಆಸ್ಪತ್ರೆಗೆ, ಬಳಿಕ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಜುಲೈ 28 ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ಬಳಿಕ ಹೆಚ್ಚಿನ ತನಿಖೆಯ ಉದ್ದೇಶದಿಂದ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.




