ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಉಪ್ಪಿನಂಗಡಿ, ಜು. 30 :  ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಜುಲೈ 16 ರಂದು ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯು ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಎಂಬ ಕಾರಣಕ್ಕೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು.

ಲಾವಣ್ಯಳನ್ನು ಕೊಲೆಗೈಯುವ ಬಗ್ಗೆ ಪೂರ್ವ ಯೋಜನೆಯನ್ನು ರೂಪಿಸಿದ್ದ ಎನ್ನಲಾಗಿದ್ದು, ಪೂರಕವಾಗಿ ಜುಲೈ 15 ರಂದೇ ಉಪ್ಪಿನಂಗಡಿಗೆ ಆಗಮಿಸಿ ಅಲ್ಲಿ ಕೃಷಿ ಸಲಕರಣೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ್ದ. ಅಲ್ಲಿ ಕೃಷಿಕರು ಬಳಕೆಗೆ ಬೇಕಾಗುವ ಉದ್ದನೆಯ ಕತ್ತಿಯನ್ನು ಪರಿಶೀಲಿಸಿ ಅದರ ಬೆಲೆಯನ್ನು ಕೇಳಿದ್ದ. ಬಳಿಕ ಅಲ್ಲಿದ ಹೋರ ಹೋಗಿ ಬೇರೆಲ್ಲೋ ವಿಚಾರಿಸಲು ಯತ್ನಿಸಿ ಮರಳಿ ಅದೇ ಮಳಿಗೆಗೆ ಬಂದು ಕತ್ತಿಯನ್ನು ಖರೀದಿಸಿದ್ದ.

ಕಾಗದದಿಂದ ಸುತ್ತುವರೆದು ಪ್ಯಾಕ್ ಮಾಡಲಾದ ಕತ್ತಿಯನ್ನು ಅಲ್ಲೇ ಸ್ವಲ್ಪ ಹೊತ್ತು ಇರಿಸಿ ಹೊರ ಹೋದಾತ ಬಳಿಕ ಬಂದು ಕತ್ತಿಯನ್ನು ಪಡೆದುಕೊಂಡು ಹೋಗಿರುವ ದೃಶ್ಯಾವಳಿಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಈ ಬಗ್ಗೆ ತನಿಖಾಧಿಕಾರಿಗಳು ಆರೋಪಿ ಚೇತನ್ ನ ಮುಖವನ್ನು ಕಪ್ಪು ಬಟ್ಟೆಯಿಂದ ಮರೆಮಾಚಿ ಸ್ಥಳಕ್ಕೆ ಕರೆ ತಂದಿದ್ದು, ಮಹಜರು ಪ್ರಕ್ರಿಯೆಯನ್ನು ನಡೆಸಿದರು ಎಂದು ತಿಳಿದುಬಂದಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

⚠️ Contents are protected on this website.