ಬಂಟ್ವಾಳ : ಆರೋಪಿ ಚೇತನ್ ವೆನ್ಲಾಕ್ ಆಸ್ಪತ್ರೆಗೆ ಶಿಫ್ಟ್ – ಬಿಗಿ ಭದ್ರತೆಯಲ್ಲಿ ಚಿಕಿತ್ಸೆ

Advertisement

ಬಂಟ್ವಾಳ, ಜು. 17 : ತಾಲೂಕಿನ ಕಕ್ಯಪದವು ಮೈರ ಸಮೀಪದ ಲಾವಣ್ಯ ಗೌಡ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಮಂಗಳೂರಿನ ಪಚ್ಚನಾಡಿ ಪ್ರದೇಶದಲ್ಲಿ ಬಂಧಿಸಿದ್ದಾರೆ.

Advertisement

ಬಂಧನದ ವೇಳೆ ತಾನು ಹಿಂದಿನ ದಿನವೇ ಇಲಿ ಪಾಷಾಣ ಸೇವಿಸಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಕೂಡಲೇ ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು.

Advertisement

ಆರೋಪಿಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ, ಜಿಲ್ಲಾ ಆಸ್ಪತ್ರೆಯಾದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚನೆ ನೀಡಿದರು. ಅದರಂತೆ ಮಧ್ಯಾಹ್ನದ ವೇಳೆಗೆ ಆತನನ್ನು ಆಂಬ್ಯುಲೆನ್ಸ್ ಮೂಲಕ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೆನ್‌ಲಾಕ್ ಆಸ್ಪತ್ರೆಯಲ್ಲಿ ಚೇತನ್‌ಗೆ ಚಿಕಿತ್ಸೆ ಮುಂದುವರಿದಿದ್ದು, ಆತನ ಆರೋಗ್ಯದ ಸ್ಥಿತಿ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಆಸ್ಪತ್ರೆಯ ವೈದ್ಯರು ನೀಡಬೇಕಿದೆ.

ಸದ್ಯ ಆರೋಪಿ ಚೇತನ್ ಪೊಲೀಸ್ ಬಿಗಿ ಭದ್ರತೆಯ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ