ಬೆಳ್ತಂಗಡಿ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ –  ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Advertisement

ಬೆಳ್ತಂಗಡಿ, ಆ. 30 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್‌ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ.

ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ ಕಾರು ಚಿಬಿದ್ರೆ ಸಮೀಪಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಚಿಬಿದ್ರೆ ಸೇರಿದಂತೆ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ