ಚೀನಾ : 1,500 ವರ್ಷಗಳಷ್ಟು ಹಳೆಯ ದೇವಾಲಯ ಬೆಂಕಿಗಾಹುತಿ

Advertisement

ಚೀನಾ : ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ ಯೋಂಗ್‌ಕಿಂಗ್ ದೇವಾಲಯವು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ. ಸುಮಾರು 1,500 ವರ್ಷಗಳಷ್ಟು ಹಳೆಯದಾದ ಈ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದೆ.

Advertisement

ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ಈ ಪ್ರಾಚೀನ ದೇವಾಲಯದ, ಸಂಕೀರ್ಣದೊಳಗಿನ ಬಹುಮಹಡಿ ಮಂಟಪಗಳು ಸುಟ್ಟುಹೋಗಿವೆ. ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು ತಂಡಗಳು ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸಪಟ್ಟಿವೆ. ಪ್ರಸ್ತುತ ಘಟನೆಯ ಕಾರಣವನ್ನು ತನಿಖೆ ನಡೆಸಲಾಗುತ್ತಿದ್ದು, ದೋಷಪೂರಿತ ವೈರಿಂಗ್, ಧೂಪದ್ರವ್ಯ ಬಳಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ