ಗಗನಕ್ಕೇರಿದ “ಚಿನ್ನದ ದರ ಇಳಿಯಲಿ” – ದುರ್ಗಮ್ಮ ದೇವಿಯ ಮೊರೆ ಹೋದ ಭಕ್ತ !

ವಿಜಯನಗರ, ಜ.30 : ದಿನದಿಂದ ದಿನಕ್ಕೆ ಚಿನ್ನದ ಬೆಲೆ ಸಾವಿರಾರು ರೂಪಾಯಿಯಂತೆ ಏರುತ್ತಲೇ ಇದೆ. ಬಡವರು, ಮಧ್ಯಮ ವರ್ಗದವರು ಚಿನ್ನ ಖರೀದಿ ಮಾಡುವುದೇ ಅಸಾಧ್ಯವೆನ್ನುವ ರೀತಿಯಲ್ಲಿ ಬೆಲೆ ಏರಿಕೆಯಾಗಿದೆ. ಹೀಗಿರುವಾಗ ಭಕ್ತನೊಬ್ಬ ಚಿನ್ನದ ದರ ಇಳಿಕೆಗಾಗಿ ದೇವಿಯ ಮೊರೆ ಹೋಗಿರುವ ಘಟನೆ ವರದಿಯಾಗಿದೆ. ಹೌದು, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ಸಲ್ಲಿಸಿದ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ.

Advertisement

ಭಕ್ತ ಕೆ. ನಾಗರಾಜ ಉಲವತ್ತಿ ಅವರು, “ಚಿನ್ನದ ದರ ಇಳಿಯಲಿ, ಬಡವರು ಹಾಗೂ ಸಾಮಾನ್ಯ ಜನರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಅಪರೂಪದ ಆಶಯದೊಂದಿಗೆ ದೇವಿಯ ಮುಂದೆ ಹರಕೆ ಸಲ್ಲಿಸಿದರು. ತಾಯಿಯ ರಥೋತ್ಸವದ ವೇಳೆ, ನಾಗರಾಜ ಉಲವತ್ತಿ ಅವರು ಬಾಳೆ ಹಣ್ಣಿನ ಮೇಲೆ “ಚಿನ್ನದ ದರ ಇಳಿಯಲಿ, ಮುನಿದ ಚಿನ್ನ ಒಲಿಯಲಿ” ಎಂದು ಬರೆದು ಭಕ್ತಿಪೂರ್ವಕವಾಗಿ ದೇವಿಗೆ ಅರ್ಪಿಸಿದರು. ಈ ವಿಭಿನ್ನ ಭಕ್ತಿ ಪ್ರದರ್ಶನ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರ ಗಮನ ಸೆಳೆಯಿತು.

ಚಿಮ್ನಳ್ಳಿ ದುರ್ಗಮ್ಮ ಜಾತ್ರೆಯಲ್ಲಿ ಭಕ್ತರ ಮಹಾಪೂರವೇ ಹರಿದು ಬರುತ್ತಿರುವ ಸಂದರ್ಭದಲ್ಲಿ, ನಾಗರಾಜ ಅವರ ಈ ವಿಶಿಷ್ಟ ಹರಕೆ ವಿಶೇಷ ಚರ್ಚೆಗೆ ಕಾರಣವಾಯಿತು. ದೇವಿಯ ಕೃಪೆಯಿಂದ ಚಿನ್ನದ ಬೆಲೆ ಇಳಿದು, ಸಾಮಾನ್ಯ ಜನರಿಗೂ ಚಿನ್ನದ ಕನಸು ನನಸಾಗಲಿ ಎಂಬ ಹಾರೈಕೆಯನ್ನು ಅನೇಕ ಭಕ್ತರು ವ್ಯಕ್ತಪಡಿಸಿದರು. ದೇಶಾದ್ಯಂತ ಚಿನ್ನದ ಬೆಲೆ ಏರಿಕೆಯಿಂದ ಸಾಮಾನ್ಯ ಜನರಲ್ಲಿ ಆತಂಕ ಹೆಚ್ಚಿರುವ ಈ ಸಂದರ್ಭದಲ್ಲಿ, ಭಕ್ತಿಪೂರ್ಣವಾಗಿ ವ್ಯಕ್ತವಾದ ಈ ಆಶಯ ಸಾಮಾಜಿಕವಾಗಿ ಕೂಡ ಗಮನ ಸೆಳೆದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.