ಕಾರ್ಕಳ : ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ ಸಾವು

ಕಾರ್ಕಳ, ಜ. 22 : ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದಲ್ಲಿ ನಡೆದಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರು ಸಮಾಜ ಸೇವಕ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರಿಗೆ ಮಾಹಿತಿ ನೀಡಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

Advertisement

ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಯಿಯನ್ನು ಅಟ್ಟಿಸಿಕೊಂಡು ಹೋಗುವಾಗ ಚಿರತೆಯು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಚಿರತೆಯ ದೇಹವು ಕೊಳೆತ ಸ್ಥಿತಿಯಲ್ಲಿದ್ದುದನ್ನು ಗಮನಿಸಿದ ಅಧಿಕಾರಿಗಳು, ಇದು ಎರಡು-ಮೂರು ದಿನಗಳ ಹಿಂದೆಯೇ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ.

ಈ ಪರಿಸರದ ಸುತ್ತಮುತ್ತ ಹಲವಾರು ಮನೆಗಳಿದ್ದು, ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಗ್ರಾಮಸ್ಥರ ಆತಂಕದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಲವು ಬಾರಿ ಬೋನು ಇರಿಸಿದ್ದರೂ, ಯಾವುದೇ ಚಿರತೆ ಸೆರೆಸಿಕ್ಕಿರಲಿಲ್ಲ. ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ನೇತೃತ್ವದ ತಂಡವು ಚಿರತೆಯ ದೇಹವನ್ನು ಬಾವಿಯಿಂದ ಮೇಲೆತ್ತಿ, ಪಶುವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು. ನಂತರ ನಿಯಮಾನುಸಾರ ಚಿರತೆಯ ಅಂತ್ಯಕ್ರಿಯೆಯನ್ನು ನಡೆಸಲಾಯಿತು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.