ಹುಣಸೂರು : ಆಹಾರ ಅರಸಿ ಹೆದ್ದಾರಿ ದಾಟುತ್ತಿದ್ದ ಚಿರತೆ ಅಪರಿಚಿತ ವಾಹನ ಢಿಕ್ಕಿ – ಚಿರತೆ ಸ್ಥಳದಲ್ಲೇ ಸಾವು !

ಹುಣಸೂರು, ಜೂ. 26 : ಆಹಾರ ಅರಸಿ ಹೆದ್ದಾರಿ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅರಬ್ಬಿತಿಟ್ಟು ವನ್ಯಧಾಮದ ಬಳಿಯ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

Advertisement

ಅರಬ್ಬಿತಿಟ್ಟು ಸಂರಕ್ಷಿತ ಅರಣ್ಯ ಪ್ರದೇಶದಿಂದ ಆಹಾರ ಅರಸಿ ಹೆದ್ದಾರಿ ಎದುರಿನ ರಕ್ಷಿತಾರಣ್ಯದ ಕಡೆಗೆ ಚಿರತೆ ರಸ್ತೆ ದಾಟುತ್ತಿದ್ದ ವೇಳೆ ಹುಣಸೂರು ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಮಾಹಿತಿ ಮೇರೆಗೆ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಡಿಆರ್‌ಎಫ್‌ಓ ರಮಣಗೌಡ ಹಾಗೂ ಸಿಬಂದಿಗಳು ದೌಡಾಯಿಸಿ ಪರಿಶೀಲಿಸಿ, ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಬಿಳಿಕೆರೆ ಠಾಣಾ ಪೊಲೀಸರು ಭೇಟಿ ಇತ್ತು ಪರಿಶೀಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.