ಕಾರ್ಕಳ : ಬೀದಿ ನಾಯಿಗಳ ಕಾಟ ತಪ್ಪಿದರೂ, ಚಿರತೆ ಕಾಟಕ್ಕೆ ಜನತೆ ಕಂಗಾಲು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಾರ್ಕಳ : ನಗರದ ಹಲವು ಭಾಗಗಳಲ್ಲಿ ಬೀದಿನಾಯಿಗಳ ಕಾಟದಿಂದ ಸ್ಥಳೀಯರು, ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಕಂಗಾಲಾಗಿದ್ದರು. ಆದರೆ, ಕೆಲವು ದಿನಗಳ ಹಿಂದೆ ಚಿರತೆಯೊಂದು ಬೀದಿನಾಯಿಗಳ ಹಿಂಡಿಗೆ ದಾಳಿ ನಡೆಸಿ, ನಾಯಿಯೊಂದನ್ನು ಕೊಂದು ಹಾಕಿತ್ತು. ಆ ಬಳಿಕ ಬೀದಿನಾಯಿಗಳ ಕಾಟ ಸ್ಥಳೀಯವಾಗಿ ತಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬೀದಿ ನಾಯಿ ಕಾಟ ತಪ್ಪಿದ್ದೇನು ನಿಜ ಆದರೆ, ಚಿರತೆ ಆತಂಕವೀಗ ಸ್ಥಳೀಯರನ್ನು ಕಾಡುತ್ತಿದೆ.

Advertisement

ನಗರದ ತೆಳ್ಳಾರು ರಸ್ತೆ ಸೇರಿದಂತೆ ವಿವಿಧ ಜಂಕ್ಷನ್‌ಗಳಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿತ್ತು. ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು, ಪಾದಚಾರಿಗಳು, ವಿದ್ಯಾರ್ಥಿಗಳು ಹೈರಾಣಾಗಿದ್ದರು. ಆದರೆ, ಚಿರತೆ ದಾಳಿಯ ಬಳಿಕ ಬೀದಿನಾಯಿಗಳ ಕಾಟ ತಪ್ಪಿದ್ದು, ಸದ್ಯ ಚಿರತೆಯ ಆತಂಕದಲ್ಲೇ ಸ್ಥಳೀಯರು ದಿನ ಕಳೆಯುವಂತೆ ಆಗಿದೆ.

ಕಳೆದ ನಾಲ್ಕೈದು ತಿಂಗಳ ಹಿಂದೆ ರಾಮಸಮುದ್ರದ ಪರಿಸರ, ಬಂಡಿಮಠ, ಪೆರ್ವಾಜೆ, ಶ್ರೀ ವೆಂಕಟರಮಣ ದೇವಸ್ಥಾನದ ಪರಿಸರದಲ್ಲಿ ಚಿರತೆ ಉಪಟಳವಿತ್ತು. ಅಲ್ಲದೆ ಕಣಜಾರು, ಪಳ್ಳಿ, ನೀರೆ ಬೈಲೂರು, ಕೌಡೂರು, ಯರ್ಲಪಾಡಿ, ಕಾಂತಾವರ, ಬೆಳ್ಳಣ್, ಮುಡಾರು, ಮುಂಡ್ಲಿ ಕೆರ್ವಾಶೆ, ಹೆಬ್ರಿ ತಾಲೂಕಿನ ವರಂಗ, ಮುನಿಯಾಲು, ಅಂಡಾರು ಪರಿಸರದಲ್ಲಿ ಆಗೊಮ್ಮೆ ಈಗೊಮ್ಮೆ ಚಿರತೆಗಳು ಕಾಣಸಿಗುವುದು ಸಾಮಾನ್ಯವಾಗಿದೆ. ಜಾನುವಾರು, ನಾಯಿ, ಬೆಕ್ಕುಗಳ ಬೇಟೆಗಾಗಿ ಚಿರತೆಗಳು ಕಾಡಿನಿಂದ ನಾಡಿನತ್ತ ಬರುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಬಗ್ಗೆ ಆದಷ್ಟು ಶೀಘ್ರವಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.