ಮಂಗಳೂರು : ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಚೌಟ, ಶಾಸಕ ಪೂಂಜಾ

ಮಂಗಳೂರು, ಫೆ. 06 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಂಸದ ಬ್ರಿಜೇಶ್ ಚೌಟ ಅವರು ಗುರುವಾರ ಹೊಸದಿಲ್ಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಕಾಮಗಾರಿ ಪ್ರಗತಿ ಬಗ್ಗೆ ಸಂಸದರು ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಈ ಯೋಜನೆಗಳ ಕಾಮಗಾರಿಗಳನ್ನು ಯಾವುದೇ ವಿಳಂಬವಾಗದಂತೆ ಗಮನ ಹರಿಸುವ ಮೂಲಕ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಈ ವೇಳೆ ಪ್ರಮುಖವಾಗಿ ಶಿರಾಡಿ ಘಾಟ್ ಹಾಗೂ ಸುರತ್ಕಲ್ – ಬಿ.ಸಿ ರೋಡ್ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ಯೋಜನೆಗಳು ಜಿಲ್ಲೆಯ ರಸ್ತೆ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಇವುಗಳ ಅನುಷ್ಠಾನಕ್ಕೆ ವೇಗ ನೀಡುವಂತೆಯೂ ಅಧಿಕಾರಿಗಳಿಗೆ ಸಂಸದ ಕ್ಯಾ, ಚೌಟ ಅವರು ಮನವರಿಕೆ ಮಾಡಿದ್ದಾರೆ. ಅಲ್ಲದೆ, ಮಾಣಿ -ಸಂಪಾಜೆ ನಡುವಿನ ರಸ್ತೆಯು ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ವ್ಯಾಪ್ತಿಗೆ ಬಂದಿರುವುದರಿಂದ, ಅದರ ಅಭಿವೃದ್ಧಿ ಕಾಮಗಾರಿಗಳ ಬಗ್ಗೆಯೂ ಹೆಚ್ಚಿನ ಗಮನಹರಿಸುವ ಮೂಲಕ ಮರುಪರಿಶೀಲಿಸುವ ಅಗತ್ಯತೆಯನ್ನು ಸಂಸದರು ಸೂಚಿಸಿದರು. ಈ ಭೇಟಿಯ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.