ಮಂಗಳೂರು : ಸಿಟಿ ಸೆಂಟರ್ ಕೆಎಫ್‌ಸಿಯಲ್ಲಿ ಕೊಳೆತ ಚಿಕನ್‌ ಪತ್ತೆ- ರೆಸ್ಟೋರೆಂಟ್‌ಗೆ ಬೀಗ ಹಾಕಿದ ಅಧಿಕಾರಿಗಳು

Advertisement

ಮಂಗಳೂರು, ಆ. 16 : ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಶನಿವಾರ ದಾಳಿ ನಡೆಸಿದ್ದಾರೆ.

ಈ ಸಂದರ್ಭ ಕೆಎಫ್‌ಸಿಯಲ್ಲಿ ನೈರ್ಮಲ್ಯವಿಲ್ಲದ ಸ್ಟೋರೇಜ್‌ನಲ್ಲಿ ಕೊಳೆತ ಮಾಂಸ ಪತ್ತೆ, ಅವಧಿ ಮೀರಿದ ಎಣ್ಣೆ ಕಂಡು ಬಂದಿದೆ. ಇವೆಲ್ಲವನ್ನೂ ಅಧಿಕಾರಿಗಳು ವಶಪಡಿಸಿಕೊಂಡು ಬೀಗ ಜಡಿದಿದ್ದಾರೆ. ಅಲ್ಲದೆ ಪತ್ತೆಯಾದ ಸ್ಯಾಂಪಲ್‌ ಗಳನ್ನು ಪರೀಕ್ಷೆ ಮಾಡಲು ಮೈಸೂರಿಗೆ ಕಳುಹಿಸಿಕೊಡಲಿದ್ದಾರೆ ಎಂದು ತಿಳಿದು ಬಂದಿದೆ.

Advertisement



ಮಾಜಿ ಮೇಯರ್ ಮತ್ತು ಬಿಜೆಪಿ ನಾಯಕಿ ಕವಿತಾ ಸನಿಲ್ ತಮ್ಮ ಮಗುವಿಗೆ ಸ್ವಿಗ್ಗಿ ಮೂಲಕ ಪೆರಿ-ಪೆರಿ ಚಿಕನ್ ಆರ್ಡರ್ ಮಾಡಿದ್ದರು. ಕೆಎಫ್‌ಸಿ ಪಾರ್ಸೆಲ್ ಬಂದ ನಂತರ, ಅವರ 10 ವರ್ಷದ ಮಗು ಕೋಳಿಯನ್ನು ತಿನ್ನುತ್ತಿದ್ದಾಗ ಮಾಂಸ ಕಪ್ಪು ಬಣ್ಣಕ್ಕೆ ತಿರುಗಿರುವುದನ್ನು ಕಂಡು ಬಂತು. ಅದು ಕೆಟ್ಟ ವಾಸನೆಯನ್ನು ಹೊಂದಿತ್ತು ಎಂದು ವರದಿಯಾಗಿದೆ.

ಬಿಲ್ ಹೊತ್ತುಕೊಂಡು ಕವಿತಾ, ತಕ್ಷಣ ಸಿಟಿ ಸೆಂಟರ್ ಮಾಲ್‌ನಲ್ಲಿರುವ ಕೆಎಫ್‌ಸಿ ಔಟ್‌ಲೆಟ್‌ಗೆ ಹೋಗಿ ಡಿಎಚ್‌ಒ ಮತ್ತು ಇತರ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ್ದಾರೆ. ಅವರು ಈ ವಿಷಯವನ್ನು ಉಸ್ತುವಾರಿ ಸಚಿವ ಯುಟಿ ಖಾದರ್ ಅವರ ಗಮನಕ್ಕೂ ತಂದರು. ತಕ್ಷಣ ಅವರು ದ.ಕ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ರ ಗಮನಕ್ಕೆ ತಂದಿದ್ದಾರೆ. ಸಚಿವರ ಸೂಚನೆಯಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಮತ್ತು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ಜಂಟಿಯಾಗಿ ಕೆಎಫ್‌ಸಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ನಗರದ ವ್ಯಕ್ತಿಯೊಬ್ಬರು ಕೆಎಫ್‌ಸಿಯಿಂದ ಚಿಕನ್ ಫೆರಿ ಆರ್ಡರ್ ಮಾಡಿದ್ದು, ಅದರಂತೆ ಸರಬರಾಜು ಮಾಡಲಾಗಿತ್ತು. ಅದರ ಬಾಕ್ಸ್ ತೆರೆದಾಗ ಮಾಂಸ ಕೆಟ್ಟ ವಾಸನೆ ಬಂದಿತ್ತು. ತಕ್ಷಣ ಅವರು ದ.ಕ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ರ ಗಮನಕ್ಕೆ ತಂದಿದ್ದಾರೆ. ಸಚಿವರ ಸೂಚನೆಯಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಮತ್ತು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ಜಂಟಿಯಾಗಿ ಕೆಎಫ್‌ಸಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಕೆಎಫ್‌ಸಿಗೆ ಬೆಂಗಳೂರಿನಿಂದ ಕೋಳಿ ಮಾಂಸ ರವಾನೆಯಾಗುತ್ತಿದ್ದು ಎನ್ನಲಾಗಿದೆ. ಸುಮಾರು 7-8 ತಿಂಗಳ ಹಿಂದಿನ ಮಾಂಸವನ್ನು ಇಲ್ಲಿ ದಾಸ್ತಾನಿಡಲಾಗುತ್ತಿತ್ತು ಎನ್ನಲಾಗಿದೆ. ಅಧಿಕಾರಿಗಳು ಸ್ಟೋರೆಜ್ ರೂಂ ಪ್ರವೇಶಿಸಿದಾಗ ಗಬ್ಬು ವಾಸನೆ ಬರುತ್ತಿದ್ದು, ಈ ಬಗ್ಗೆ ಸಿಬ್ಬಂದಿಗಳ ಬಳಿ ಪ್ರಶ್ನಿಸಿದಾಗ ಸಮರ್ಪಕ ಉತ್ತರ ಸಿಗಲಿಲ್ಲ. ಈ ಸ್ಟೊರೇಜ್‌ನಲ್ಲಿ ಮೂರು ಮಾದರಿಯ ಚಿಕನ್‌ಗಳನ್ನು ದಾಸ್ತಾನಿಡಲಾಗಿತ್ತು. ಅದಲ್ಲದೆ ಅವಧಿ ಮೀರಿದ ಎಣ್ಣೆ ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮೈಸೂರಿನ ಆಹಾರ ತಪಾಸಣಾ ಲ್ಯಾಬೋರೇಟರಿಗೆ ಕಳುಹಿಸಲಾಗುವುದು. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಕಲುಷಿತ ಆಹಾರ ನೀಡಿರುವುದು ಮತ್ತು ಅನೈರ್ಮಲ್ಯ, ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ