ನವದೆಹಲಿ : ಸಿಜೆಪಿ ಹಿಂಸಾಚಾರಕ್ಕೆ ಪಾಕಿಸ್ತಾನದ ಕುಮ್ಮಕ್ಕು ? – ಪೊಲೀಸರಿಂದ ತನಿಖೆ ಚುರುಕು

Advertisement

ನವದೆಹಲಿ, ಜು. 21 : ರಾಷ್ಟ್ರ ರಾಜಧಾನಿಯಲ್ಲಿ ಸಿಜೆಪಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಪೊಲೀಸರು ಪಾಕಿಸ್ತಾನಿ ಹ್ಯಾಂಡಲ್‌ಗಳೊಂದಿಗೆ ನಂಟಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಕುರಿತು ತನಿಖೆ ಆರಂಭಿಸಿದ್ದಾರೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುಳ್ಳು ಸುದ್ದಿಗಳೇ ಸಂಘರ್ಷ ತೀವ್ರಗೊಳ್ಳಲು ಕಾರಣವಾಯಿತೇ ಎಂಬ ಬಗ್ಗೆ ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಅಲ್ಲದೆ, ಪ್ರತಿಭಟನಾ ಸ್ಥಳದಲ್ಲಿ ಹಲವು ಯುವಕರ ಹೇಳಿಕೆಗಳನ್ನು ಕೂಡಾ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

ಹಿಂಸಾಚಾರದಲ್ಲಿ ತೊಡಗಿದವರ ಪತ್ತೆಗೆ ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಹಿಂಸಾಚಾರದ ಹಿಂದೆ ಪಾಕ್ ಸಂಚು ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಘರ್ಷಣೆಗೆ ಸಂಬಂಧಿಸಿದ ಕೆಲವು ಟ್ವಿಟ್‌ಗಳು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳಿಂದ ಅಪ್‌ಲೋಡ್ ಆಗಿರುವ ಮಾಹಿತಿಯಿದ್ದು, ವದಂತಿಗಳನ್ನು ಹಬ್ಬಿಸುವ ಮೂಲಕ ಹಿಂಸೆಗೆ ಪ್ರಚೋದನೆ ನೀಡಲಾಯಿತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ