ಚಿಕ್ಕಮಗಳೂರು : ಮನೆ ಮಂದಿಯ ಎದುರಲ್ಲೇ ಪುಟ್ಟ ಬಾಲಕಿಯನ್ನು ಕಾಡಿನತ್ತ ಎಳೆದೊಯ್ದ ಚಿರತೆ…!

Advertisement

ಚಿಕ್ಕಮಗಳೂರು : ಮನೆ ಸಮೀಪ ಆಟವಾಡುತ್ತಿದ್ದ ಪುಟ್ಟ ಕಂದಮ್ಮನನ್ನು ಚಿರತೆಯೊಂದು ಹೊತ್ತೊಯ್ದು, ಕೊಂದು ಹಾಕಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೀರೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮುಂಡ್ರೆ ಸಮೀಪದ ನವಿಲುಗುಡ್ಡ ಗ್ರಾಮದಲ್ಲಿ ವರದಿಯಾಗಿದೆ. ಬಸವರಾಜ್‌ ಮತ್ತು ರೇಣುಕಮ್ಮ ದಂಪತಿ ಪುತ್ರಿ ಸಾನ್ವಿ (5) ಚಿರತೆ ದಾಳಿಯಿಂದ ಮೃತಪಟ್ಟ ಕಂದಮ್ಮ ಎಂದು ಗುರುತಿಸಲಾಗಿದೆ.

Advertisement

ಮನೆಯ ಹಿಂದೆ ನಿಂತಿದ್ದ ಮಗುವಿನ ಸಮೀಪ ಚಿರತೆ ಬಂದಿದ್ದು, ಚಿರತೆ ನೋಡಿ ಮಗು ಕೂಗಿಕೊಳ್ಳುತ್ತಿದ್ದಂತೆ ಮನೆಯವರು ಬಂದು ನೋಡಿದಾಗ ಚಿರತೆ ಮಗುವನ್ನು ಕಾಡಿನತ್ತ ಎಳೆದೊಯ್ದಿದೆ ಎನ್ನಲಾಗಿದೆ. ಸ್ಥಳೀಯರು ಕಾಡಂಚಿನಲ್ಲಿ ಹುಡುಕಾಟ ನಡೆಸಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಬೀರೂರು ಪೊಲೀಸ್‌ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ. ಬಸವರಾಜ್ ಬಾಗಲಕೋಟೆ ಜಿಲ್ಲೆಯ ಹನಗುಂದ ತಾಲೂಕಿನ ಕಮ್ಮತ್ತಗಿರಿ ನಿವಾಸಿಯಾಗಿದ್ದು, ಕುಟುಂಬ ಸಮೇತರಾಗಿ ಗ್ರಾಮದ ರಾಮಚಂದ್ರಪ್ಪ ಅವರ ತೋಟ ಕಾಯುವ ಕೆಲಸಕ್ಕೆ ಬಂದಿದ್ದರು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಅನೇಕ ಬಾರಿ ಚಿರತೆ ದಾಳಿ ನಡೆದಿದ್ದು, ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ