ನಾಳೆ 17ನೇ ಬಾರಿಯ ದಾಖಲೆಯ ಬಜೆಟ್ ಮಂಡನೆ ಮಂಡಿಸಲಿರುವ  ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ. 05 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಲು ಅವರು ಸಿದ್ದಗೊಂಡಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದು ಒಂದು ದಾಖಲೆಯಾಗಿದೆ.

ಜನಸಾಮಾನ್ಯರು ಈ ಬಜೆಟ್‌ನಿಂದ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಇಲಾಖಾವಾರು ಚರ್ಚೆ ನಡೆಸಿ ಬಜೆಟ್ ಅಂತಿಮಗೊಳಿಸಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ ಹೊರೆಯನ್ನು ತಗ್ಗಿಸಲು ಯೋಜನೆಗಳಲ್ಲಿ ಬದಲಾವಣೆಗಳನ್ನು ತರಲಾಗುತ್ತದೆಯೇ ಎಂಬ ಕಾದು ನೋಡಬೇಕಿದೆ. ಮೂಲಸೌಕರ್ಯ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಹೀಗಾಗಿ, ಸಿದ್ದರಾಮಯ್ಯ ಮಂಡಿಸಲಿರುವ ಈ ಬಜೆಟ್‌ನತ್ತ ರಾಜ್ಯದ ಜನರ ಚಿತ್ತ ಇದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.