ಸಿಎಂ ಡಿಕೆ ಶಿವಕುಮಾರ್ ತೆಗೆದುಕೊಂಡ 3 ಮಹತ್ವದ ನಿರ್ಧಾರಗಳು – ಯುವಕರ ಸಂಘಕ್ಕೆ 10 ಲ.ರೂ. ಅನುದಾನ !

ಬೆಂಗಳೂರು, ಜೂ. 4 : ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ, ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಾದ ನಂತರ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ನೂತನ ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಮೊದಲ ಸಚಿವ ಸಂಪುಟದಲ್ಲಿ ಜನತೆಗೆ ಹೊಸ ಕೊಡುಗೆ ನೀಡಲು ತೀರ್ಮಾನ ಮಾಡಿದ್ದೆವು ಎಂದು ಸಿಎಂ ಹೇಳಿದ್ದಾರೆ.

Advertisement

ಬೆಂಗಳೂರು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್, ಕೇವಲ ಮಾತು ಕೊಡುವುದಲ್ಲ, ಅದನ್ನು ಜಾರಿಗೆ ತರಬೇಕು. ನಾನೇ ಬೆಂಗಳೂರಿನಲ್ಲಿ ಕಸ ಎತ್ತುವ ವಿಚಾರವಾಗಿ 3 ವರ್ಷಗಳಲ್ಲಿ ನಮ್ಮ ಮುಂದೆ ಎಷ್ಟು ಸವಾಲುಗಳು ಎದುರಾಗಿವೆ ಎಂದು ಅನುಭವಿಸಿದ್ದೇನೆ. ಅದೇ ರೀತಿ ದೊಡ್ಡ ಸವಾಲು ಎದುರಿಸಬೇಕಾಗಿದೆ. ರೈತರ ಸಮಸ್ಯೆ ಬಗೆಹರಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಹೇಳಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಮನೆ ಕಟ್ಟುವವರ ಸಮಸ್ಯೆಗಳಿಗೆ ಸ್ಪಂದಿಸಿದ ನೂತನ ಸಿಎಂ

ರಾಜ್ಯದಲ್ಲಿ ಪ್ರತೀ ಮನೆಯಲ್ಲಿ ಎಲ್ಲರಿಗೂ ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಒಸಿ ಮತ್ತು ಸಿಸಿ. “ಜನರನ್ನು ಕಾಡುತ್ತಿರುವ ದೊಡ್ಡ ಸಮಸ್ಯೆ ಎಂದರೆ ಅದು ಒಸಿ (Occupancy Certificate) ಮತ್ತು ಸಿಸಿ (Completion Certificate) . ಈ ಸಮಸ್ಯೆ ಬಗೆಹರಿಸಲು ಚರ್ಚೆ ಮಾಡಿ 2,500 ಅಡಿವರೆಗೂ 20% ಹೆಚ್ಚುಕಮ್ಮಿ ಇದ್ದರೂ ಒನ್ ಟೈಮ್ ಕಳೆದ ತಿಂಗಳು 31ರವರೆಗೂ ಅರ್ಜಿ ಹಾಕಿ ಮನೆ ಕಟ್ಟಿರುವವರಿಗೆ ಅವಕಾಶ ನೀಡಲು ತೀರ್ಮಾನಿಸಿದ್ದೇವೆ. ಮನೆಕಟ್ಟುವವರಿಗೆ ನೀರು ನೀಡುವುದು ನಮ್ಮ ಕರ್ತವ್ಯ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಉಚಿತ ಬಸ್ ಪಾಸ್

ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಇದಕ್ಕಾಗಿ ಸಂಬಂಧಪಟ್ಟ ಅರ್ಜಿ ವಿತರಣೆಯ ಬಗ್ಗೆ ಸಾರಿಗೆ ಇಲಾಖೆಯು ಸದ್ಯದಲ್ಲಿಯೇ ಕ್ರಮ ಕೈಗೊಳ್ಳಲಿದೆ ಎಂದರು.

ಭಾರತ್ ಜೋಡೋ ಯುವಕರ ಸಂಘ

10 ಸಾವಿರ ಭಾರತ ಜೋಡೋ ಯುವಕರ ಸಂಘ ರಚಿಸಲು ತೀರ್ಮಾನ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಪ್ರತಿ ಪಂಚಾಯತಿಯಲ್ಲಿ ಯುವಕರ ಸಂಘ ರಚಿಸಬೇಕು. ಈ ಸಂಘದಲ್ಲಿ ಕನಿಷ್ಠ 150-200 ಯುವಕರಿರುತ್ತಾರೆ. ನಗರ ಪ್ರದೇಶಗಳಲ್ಲಿ ವಾರ್ಡ್ ಮಟ್ಟದಲ್ಲಿ ಸಂಘ ರೂಪಿಸಲಾಗುವುದು. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ನಾಯಕತ್ವ ಬೆಳೆಸಿಕೊಳ್ಳಲು, ಸಾಮಾಜಿಕ ಸಾಮರಸ್ಯಕ್ಕೆ, ಯುವಕರ ಪ್ರತಿಭೆ ಅವರಣಕ್ಕೆ ವೇದಿಕೆ ಕಲ್ಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ಸರ್ಕಾರ, ಈಗಾಗಲೇ 56,000 ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಕೈಗೊಂಡಿದೆ. ಖಾಸಗಿ ರಂಗದಲ್ಲಿ ಉದ್ಯೋಗ ಬಯಸುವ ಯುವಜನರಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳ ನಡುವೆ ಸಂಪರ್ಕ ಕಲ್ಪಿಸುವ ‘ಯುವ ಉದ್ಯೋಗ ಸೇತು’ ವ್ಯವಸ್ಥೆಯನ್ನು ರೂಪಿಸಲು ನಿರ್ಣಯಿಸಲಾಗಿದೆ.

ಈ ಸೌಲಭ್ಯ ಕೇಂದ್ರದಲ್ಲಿ ಕಂಪನಿಗಳಿಗೆ ಅಗತ್ಯವಿರುವ ತರಬೇತಿಯನ್ನೂ ನೀಡಿ, ಅಲ್ಲಿನ ಅಭ್ಯರ್ಥಿಗಳನ್ನು ಕಂಪನಿಗಳಿಗೆ ಆಯ್ಕೆ ಮಾಡಲಾಗುವುದು. ಕರ್ನಾಟಕದವರಿಗೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಪಾಲು ನೀಡಲಾಗುವುದು. ಕನ್ನಡಿಗರಿಗೆ ನೀಡಬೇಕಾದ ಉದ್ಯೋಗದ ಶೇಕಡಾವಾರನ್ನು ಕಂಪನಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ತಿಂಗಳೊಳಗೆ ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ಎಲ್ಲವೂ ಆನ್ ಲೈನ್ ಮೂಲಕ ಲಭ್ಯವಾಗಲಿದೆ ಎಂದು ಡಿಕೆಶಿ ತಿಳಿಸಿದರು.

ಎಖಾತಾ ಮತ್ತು ಬಿಖಾತಾ ವರ್ಗಾವಣೆಯ ನಿರ್ಧಾರ

ಎಖಾತಾ ಮತ್ತು ಬಿಖಾತಾ ವರ್ಗಾವಣೆಯನ್ನು ಬೆಂಗಳೂರಿಗೆ ಸೀಮಿತವಾಗಿ ಪ್ರಾಯೋಗಿಕವಾಗಿ ತಂದಿದ್ದೆವು, ಅದನ್ನು ರಾಜ್ಯದೆಲ್ಲಡೆ ವಿಸ್ತರಿಸುವ ಇನ್ನೊಂದು ಮಹತ್ವದ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಬಿ ಖಾತಾಯಿಂದ ಎ ಖಾತಾ ಪರಿವರ್ತನೆಗೆಯನ್ನು ಬೆಂಗಳೂರು ಮಾತ್ರವಲ್ಲದೇ, ಇಡೀ ರಾಜ್ಯಕ್ಕೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ನಮ್ಮ ಸರ್ಕಾರದ ಆರನೇ ಗ್ಯಾರಂಟಿ ಭೂ ಗ್ಯಾರಂಟಿ ಆಗಿದೆ. ಜನರ ಆಸ್ತಿಗೆ ಸರಿಯಾದ ದಾಖಲೆ ಮಾಡಿಕೊಡಲು ಮುಂದಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ರಸ್ತೆ ಡಾಂಬರೀಕರಣ

ಬೆಂಗಳೂರು ನಗರದ ಗುಂಡಿಬಿದ್ದ ರಸ್ತೆಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಲೇ ಇದೆ. ಅದೂ ಮಳೆ ಬಂದರಂತೂ, ಜನರ ಸಮಸ್ಯೆ ಹೇಳತೀರದು. ಹೀಗಾಗಿ, ಬೆಂಗಳೂರಿನ ರಸ್ತೆಗೆ ಡಾಂಬರೀಕರಣ ಮಾಡಲು ಹಣವನ್ನು ಮೀಸಲಿಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರಿನ ನಗರಗಳ ರಸ್ತೆಗಳಲ್ಲಿ ಹಾಲಿ ಯೋಜನೆಗಳನ್ನು ಹೊರತುಪಡಿಸಿ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ ನೀಡಲು ತೀರ್ಮಾನಿಸಲಾಗಿದೆ. 3-4 ತಿಂಗಳಲ್ಲಿ ಡಾಂಬರೀಕರಣ ಮಾಡಲು ತೀರ್ಮಾನಿಸಿದ್ದೇವೆ ಎಂದು ನೂತನ ಸಿಎಂ ಹೇಳಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕಾನರ್ಪ : ಅಕ್ರಮ ಗೋ ಸಾಗಾಟ – ತಡೆಯಲು ಬಂದ ಸಾರ್ವಜನಿಕರ ಮೇಲೆಯೇ ಪಿಕಪ್ ಹರಿಸಲು ಯತ್ನ !

ಟಾಪ್ ಸುದ್ದಿಗಳು

ಬೆಳ್ತಂಗಡಿ : ಸುಮಂತ್ ಸಾವು ಪ್ರಕರಣ – ಶಾಸಕ ಹರೀಶ್ ಪೂಂಜಾರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಭೇಟಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

⚠️ Contents are protected on this website.