ಮುಖ್ಯಮಂತ್ರಿಗಳು ಮತದಾರರ ಹುಂಡಿಯನ್ನೇ ಕಳ್ಳತನ ಮಾಡಲು ಹೊರಟಿದ್ದಾರೆ : ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು, ಜು. 4 : ರಾಜ್ಯದಲ್ಲಿ ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಆರಂಭವಾಗಿದೆ. ಮೊದಲ ಎರಡ್ಮೂರು ದಿನಗಳಲ್ಲೇ, ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ ಎನ್ನುವ ಆಪಾದನೆಗಳು ಕೇಳಿ ಬರುತ್ತಿವೆ. ಜೆಡಿಎಸ್, ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಿದೆ. ಈ ನಡುವೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಗಂಭೀರ ಆರೋಪ ಮಾಡಿದ್ದು, SIR ಅಕ್ರಮ ಆರಂಭವಾಗಿರುವುದೇ ಮುಖ್ಯಮಂತ್ರಿಗಳ ಮನೆಯಿಂದ ಎಂದು ದೂರಿದ್ದಾರೆ.

Advertisement

“ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಮನೆಗೆ ಜಿಲ್ಲಾಧಿಕಾರಿಗಳನ್ನು (DC) ಕರೆಸಿ ಎಸ್‌ಐಆರ್ ನಡೆಸಿದ್ದರು, ಅದೇ ಈ ಅಕ್ರಮದ ಮೊದಲ ಪೂಜೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ತಮಗಿರುವ ಅಧಿಕಾರವನ್ನು ವ್ಯವಸ್ಥಿತವಾಗಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಬೇರೆ ರಾಜ್ಯದ ಅಧಿಕಾರಿಗಳಿಂದ ಈ ಸಂಬಂಧ ತನಿಖೆಯಾಗಲಿ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಎಸ್ಐಆರ್ ಪ್ರಕ್ರಿಯೆಗೆ ಸಿಎಂ ಡಿ ಕೆ ಶಿವಕುಮಾರ್ ಚಾಲನೆ

“ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಆರಂಭವಾಗಿದ್ದು, ನನ್ನ ಮನೆಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನನ್ನ ಎನ್ಯುಮರೇಷನ್ ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಕೆ ಮಾಡಿರುವೆ. ಬೇರೆ ರಾಜ್ಯಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಕೇವಲ ಮತದಾರರಿಗೆ ಮಾತ್ರ ನೀಡುತ್ತಿದ್ದು, ಮತದಾನ ಹಕ್ಕು ಇಲ್ಲದವರಿಗೆ ಸೌಲಭ್ಯ ಹಿಂಪಡೆಯಲಾಗುತ್ತಿದೆ. ಅದೇ ವ್ಯವಸ್ಥೆ ರಾಜ್ಯದಲ್ಲೂ ಬರಬಹುದು. ಹಾಗಾಗಿ, ಎಲ್ಲರೂ ಈ ಪ್ರಕ್ರಿಯೆಯಲ್ಲಿ ತಪ್ಪದೇ ಭಾಗವಹಿಸಿ” ಎಂದು ಸಿಎಂ ಡಿಕೆ ಶಿವಕುಮಾರ್, ನಾಡಿನ ಜನತೆಗೆ ಸಂದೇಶವನ್ನು ನೀಡಿದ್ದರು.

ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

ಮುಖ್ಯಮಂತ್ರಿಗಳು ಸರ್ಕಾರಿ ಅಧಿಕಾರಿಗಳನ್ನು ಮನೆಗೆ ಕರೆಸಿ, ಫಾರಂ ಭರ್ತಿ ಮಾಡಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸಿಎಂ ದೊಡ್ದ ದೊಡ್ಡ ಭಾಷಣವನ್ನು ಮಾಡುತ್ತಾರೆ. ಇನ್ನೊಂದು ಕಡೆ, ಪಾಕಿಸ್ತಾನದ ಬಗ್ಗೆ ಹೇಳಿಕೆಯನ್ನು ನೀಡುತ್ತಾರೆ. ಹುಂಡಿ ಕಳುವಿನ ಬಗ್ಗೆ ಮಾತಾಡುತ್ತಾರೆ. ಆದರೆ ಇವರೇ ಮಾಡುತ್ತಿರುವ ಮತದಾರರ ಪಟ್ಟಿಯ ಕಳುವಿನ ಬಗ್ಗೆ ಜಾಣಮೌನ ವಹಿಸುತ್ತಾರೆ. ಇವರು ನೇರವಾಗಿ ಮತದಾರರ ಹುಂಡಿಯನ್ನೇ ಕಳ್ಳತನ ಮಾಡಲು ಹೊರಟಿದ್ದಾರೆ. ಇದಕ್ಕೆ ಏನೆಂದು ಹೇಳಬೇಕು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸಂವಿಧಾನವನ್ನೇ ಬುಡಮೇಲು ಮಾಡುವ ಜನ ಇವರು. ಅಂತಹ ಕೆಲಸಗಳಲ್ಲಿ ಇವರದು ಎತ್ತಿದ ಕೈ. ಕುಣಿಗಲ್, ಪಾವಗಡ, ಅರಕಲಗೂಡು, ಇಂಡಿ ಮುಂತಾದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಆಕ್ರಮಗಳನ್ನು ನಡೆಸುತ್ತಿದೆ. ರಾಜ್ಯದಲ್ಲಿ ಈ ಎಸ್ಐಆರ್ ಹಳ್ಳಹಿಡಿದು ಹೋಗುತ್ತಿರುವುದಕ್ಕೆ ಈ ವ್ಯಕ್ತಿಗೆ ಮೂಲ ಸೂತ್ರಧಾರಿ ಎನ್ನುವುದು ಗೊತ್ತಾಯಿತು. ಅವರ ಮನೆಯಿಂದ ಎಸ್ಐಆರ್ ಆರಂಭವಾಗಿದೆ, ಅಲ್ಲಿಗೆ ಅಕ್ರಮದ ಮೊದಲ ಪೂಜೆ ಅಲ್ಲಿಂದಲೇ ಆರಂಭವಾದಂತಾಯಿತು ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ರಾಮನಗರ ಜಿಲ್ಲಾಧಿಕಾರಿ ಅಮಾನತಿಗೆ ಕುಮಾರಸ್ವಾಮಿ ಒತ್ತಾಯ

ರಾಜ್ಯದಲ್ಲಿ ಚುರುಕುಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ರಾಮನಗರದಲ್ಲಿ ಬೃಹತ್ ‘ಸ್ಕ್ಯಾಮ್’ ಅಂಟಿಕೊಂಡಿದೆ ಎಂದು ಕುಮಾರಸ್ವಾಮಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ರಾಮನಗರ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹಾಳುಮಾಡಲು ಹೊರಟಿದೆ. ಅದಕ್ಕೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮವೇ ಸಾಕ್ಷಿ. ಕೂಡಲೇ ರಾಮನಗರ ಜಿಲ್ಲಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ವಿದ್ಯಮಾನವು ಮುಂದಿನ ದಿನಗಳಲ್ಲಿ ಹಲವು ತಿರುವುಗಳನ್ನು ಪಡೆಯಬಹುದು ಮತ್ತು ಕಾಂಗ್ರೆಸ್ ಮತ್ತು ವಿಪಕ್ಷಗಳ ನಡುವೆ ರಾಜಕೀಯ ಮೇಲಾಟಕ್ಕೆ ಕಾರಣವಾಗಬಹುದು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.