ಬೆಂಗಳೂರು : ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸಾವು – ಮೃತರ ಕುಟುಂಬಕ್ಕೆ5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು, ಏ. 10 : ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Advertisement

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಗಿದೆ ಎಂದು ತಿಳಿಸಿದ್ದಾರೆ.

ಮೃತ ಕಾರ್ಮಿಕರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದಾರೆ.

ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.