ಗ್ಯಾರಂಟಿ ಘೋಷಿಸಿ ಸಿದ್ಧರಾಮಯ್ಯ ಗೆಲುವು ಪ್ರಶ್ನಿಸಿ ಅರ್ಜಿ – ನೋಟೀಸ್ ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಡಿ.08 : ಉಚಿತ ಗ್ಯಾರಂಟಿಯ ಭರವಸೆ ನೀಡಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಭೂತಪೂರ್ವ ಜಯ ದಾಖಲಿಸಿ, ಕರ್ನಾಟಕದ ಚುಕ್ಕಾಣಿ ಹಿಡಿದಿತ್ತು. ಇದೀಗ ಇದೇ ಉಚಿತ ಗ್ಯಾರಂಟಿ ವಿಚಾರವಾಗಿ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಚಿತ ಗ್ಯಾರಂಟಿ ಕೊಡುಗೆಗಳನ್ನು ಘೋಷಿಸಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು ಸಾಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಸೋಮವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

Advertisement

ನ್ಯಾ. ವಿಕ್ರಂ ನಾಥ್ ಹಾಗೂ ನ್ಯಾ. ಸಂದೀಪ್ ಮೆಹ್ರಾರನ್ನೊಳಗೊಂಡ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ವರುಣಾ ವಿಧಾನಸಭಾ ಕ್ಷೇತ್ರದ ಮತದಾರ ಶಂಕರ ಎಂಬವರು ಸಲ್ಲಿಸಿದ್ದ ಅರ್ಜಿಯ ಮೇಲ್ಮನವಿಯ ಕುರಿತು ಪೀಠವು ವಿಚಾರಣೆ ನಡೆಸುತ್ತಿತ್ತು. ಆರಂಭದಲ್ಲಿ ಈ ಅರ್ಜಿಯನ್ನು ವಜಾಗೊಳಿಸಲು ನ್ಯಾಯಪೀಠ ಒಲವು ತೋರಿತಾದರೂ, ಎಸ್.ಸುಬ್ರಮಣಿಯನ್ ವರ್ಸಸ್ ತಮಿಳುನಾಡು ಸರಕಾರದ ಪ್ರಕರಣದಲ್ಲಿ ಚುನಾವಣಾ ಪೂರ್ವ ಆಶ್ವಾಸನೆಗಳು ಭ್ರಷ್ಟಾಚಾರಕ್ಕೆ ಸಮ ಎಂದು ಘೋಷಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಯು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಹಾಗೂ ನ್ಯಾ ಎಂ.ಎಂ.ಸುಂದರೇಶ್ ನೇತೃತ್ವದ ಸಮನ್ವಯ ನ್ಯಾಯಪೀಠದ ಮುಂದೆ ಇತ್ಯರ್ಥಕ್ಕೆ ಭಾಕಿ ಇದೆ ಎಂಬ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು, ಇದೇ ಬಗೆಯ ಪ್ರಕರಣದಲ್ಲಿ ಸೋಮವಾರ ನೋಟಿಸ್ ಜಾರಿಗೊಳಿಸಿತು.

ಹೀಗಿದ್ದೂ “ಪ್ರಣಾಳಿಕೆಯಲ್ಲಿನ ಘೋಷಣೆಗಳು ಹೇಗೆ ಭ್ರಷ್ಟಾಚಾರಕ್ಕೆ ಸಮವಾಗುತ್ತವೆ?” ಎಂದು ವಿಚಾರಣೆಯ ವೇಳೆ ನ್ಯಾ ವಿಕ್ರಂ ನಾಥ್ ಪ್ರಶ್ನಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.