ಬಂಟ್ವಾಳ : ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ – ಅಗ್ನಿಶಾಮಕ ದಳ ಕಾರ್ಯಾಚರಣೆ

ಬಂಟ್ವಾಳ, ಸೆ. 27 : ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡು–ಬೆಂಗಳೂರು ಮಾರ್ಗದ ಮಾಣಿ ಸಮೀಪದ ಸತ್ತಿಕಲ್ಲು ಅಮೈ ಎಂಬಲ್ಲಿ ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.

ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !