ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ

Advertisement

ಬೆಳ್ತಂಗಡಿ, ಆ. 24 : ನೆರಿಯಾ ಗ್ರಾಮ ಪಂಚಾಯತ್‌ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Advertisement

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು, ಕಾಂಗ್ರೆಸ್ ಪಕ್ಷವು ಎಲ್ಲ ವರ್ಗದ ಜನರನ್ನು ಸಮಾನವಾಗಿ ಕೊಂಡೊಯ್ಯುವ ಹಾಗೂ ಅಭಿವೃದ್ಧಿ ಮತ್ತು ಜನಸೇವೆಗೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ ಸಾರ್ವಜನಿಕ ಜೀವನದ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಪಕ್ಷದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ, “ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ನ್ಯಾಯದ ಬದ್ಧತೆಯನ್ನು ಮೆಚ್ಚಿ ಹಲವು ಮಂದಿ ಪಕ್ಷದತ್ತ ಒಲವು ತೋರುತ್ತಿದ್ದಾರೆ. ಮರಿಯಮ್ಮ ಅವರ ಸೇರ್ಪಡೆಯಿಂದ ನೆರಿಯಾ ಭಾಗದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಸಂಘಟಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು” ಎಂದರು.

ಮರಿಯಮ್ಮ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ ಹಾಗೂ ಜನಪರ ನಿಲುವುಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯೊಂದಿಗೆ ಕೈಜೋಡಿಸಿ ಜನಸೇವೆ ಮಾಡಲು ಬದ್ಧರಾಗಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಅಶ್ರಫ್ ಬಿ. ನೆರಿಯಾ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಟಿ., ತಾಲೂಕು ಆರಾಧನಾ ಸಮಿತಿಯ ಸದಸ್ಯ ಲಕ್ಷ್ಮಣ್ ಅಲಂಗಾಯಿ, ಬ್ಲಾಕ್ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ರೋಹಿ ಜೋಸೆಫ್, ನೆರಿಯಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಬಿ.ರಾಜನ್ ಪಿ.ಕೆ., ಸಬ್ಯಸ್ಟಿನ್ ಎಂ.ಜೆ. ಸೇರಿದಂತೆ ಪಕ್ಷದ ಪ್ರಮುಖರಾದ ಕೇಶವ ಪೂಜಾರಿ, ಮೇರಿಯ, ತಾರಾನಾಥ್ ನೆರಿಯಾ, ಬಿಬಿನ್ ದೇವಗಿರಿ, ರಮೇಶ್ ಕೆ.ಎಸ್. ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ” ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವ ಸನ್ಮಾನ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಬೃಹತ್ ಕಟೌಟ್‌ಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಹಾಡು ಬಳಸಿ ರೀಲ್ಸ್ – ಪ್ರಕರಣ ದಾಖಲು

ಕರಾವಳಿ, ಟಾಪ್ ಸುದ್ದಿಗಳು

ಬ್ರಹ್ಮಾವರ : ಕ್ಷುಲ್ಲಕ ಕಾರಣಕ್ಕೆ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಪಾಪಿ ಮಗ !

⚠️ Contents are protected on this website.