“ಕಾಂಗ್ರೆಸ್ ಫ್ಲೆಕ್ಸ್”ನಲ್ಲಿ ಪ್ರಮುಖ ನಾಯಕರಾದ ಐವನ್, ರಮನಾಥ್ ರೈ’ಯವರಿಗೆ ಜಾಗ ನೀಡದ ಕಾಂಗ್ರೆಸ್

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಯಲ್ಲೇ ಅಳವಡಿಸಿರುವ ಫ್ಲೆಕ್ಸ್ ನಲ್ಲಿ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ನಾಯಕರ ಭಾವಚಿತ್ರ ಇಲ್ಲದೇ ಇರುವುದು ಕಾಂಗ್ರೆಸ್ ನ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದೆ. ನಿಗಮ ಮಂಡಳಿಗಳಿಗೆ ನೇಮಕವಾದ ದಕ್ಷಿಣ ಕನ್ನಡ ಜಿಲ್ಲೆಯ ಐವರಿಗೆ ಶುಭಕೋರಿ ಅಳವಡಿಸಿರುವ ಫ್ಲೆಕ್ಸ್‌ನಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಉಪಾಧ್ಯಕ್ಷ ರಮನಾಥ ರೈ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಭಾವಚಿತ್ರ ಇಲ್ಲದೇ ಇರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ವಿವಾದ ಸೃಷ್ಟಿಸಿದೆ. ಇಬ್ಬರು ಪ್ರಮುಖ ನಾಯಕರ ಫೋಟೋ ಕೈಬಿಟ್ಟಿರುವುದು ಅವರ ಬೆಂಬಲಿಗರನ್ನು ಕೆರಳಿಸಿದ್ದು, ಫ್ಲೆಕ್ಸ್ ಅಳವಡಿಸಿರುವ ಪಕ್ಷದ ಜಿಲ್ಲಾ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಕೆ.ಹರೀಶ್ ಕುಮಾರ್, ಟಿ.ಎಂ ಶಹೀದ್ ತೆಕ್ಕಿಲ್, ಲಾವಣ್ಯ ಬಳ್ಳಾಲ್, ಶಾಲೆಟ್ ಪಿಂಟೋ ಮತ್ತು ವಿಶ್ವಾಸ್ ಕುಮಾರ್ ದಾಸ್ ಅವರಿಗೆ ಶುಭಕೋರಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸದಸ್ಯರು ಫ್ಲೆಕ್ಸ್ ಅಳವಡಿಸಿದ್ದರು. ಈ ಫ್ಲೆಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕೆಪಿಸಿಸಿ ಉಸ್ತುವಾರಿ ರಣ್‌ದೀಪ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ಸಿಎಂ‌ ಸಿದ್ದರಾಮಯ್ಯ, ಡಿಸಿಎಂ‌ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌ ಶಿವಕುಮಾರ್, ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಇಂಧನ ಸಚಿವ ಕೆ.ಜೆ ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎಸ್ ಮಸೂದ್ ಅವರ ಭಾವಚಿತ್ರಗಳಿವೆ. ಆದರೆ, ರಾಜಕೀಯವಾಗಿ ಸಕ್ರೀಯರಲ್ಲದ ಕೆ.ಎಸ್ ಮಸೂದ್ ಅವರ ಭಾವಚಿತ್ರ ಇರುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರಾದ ರಮಾನಾಥ ರೈ ಮತ್ತು ಎಂಎಲ್‌ಸಿ ಐವನ್ ಡಿಸೋಜಾ ಅವರ ಫೋಟೋ ಇಲ್ಲದೇ ಇರುವುದು ಇಬ್ಬರು ನಾಯಕರಿಗೆ ಅವಮಾನ ಮಾಡುವ ಉದ್ದೇಶದಿಂದ ಹಾಗೂ ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಭಿನ್ನಮತದ ಕಾರಣಕ್ಕೆ ಇಬ್ಬರು ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಮಾತುಗಳು ಕೈ ಕಾರ್ಯಕರ್ತರಲ್ಲಿ ಕೇಳಿಬರುತ್ತಿದೆ.

ಈ ಬಗ್ಗೆ ರಮಾನಾಥ ರೈ ಅವರು ತನ್ನ ಬೆಂಬಲಿಗರ ಬಳಿ‌ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿಬೆಳೆಸಿ, ಜಿಲ್ಲೆಯ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡಿ, ಕಾಂಗ್ರೆಸ್ ಪಕ್ಷಕ್ಕೆ ಸುಸಜ್ಜಿತ ಜಿಲ್ಲಾ‌ ಕಚೇರಿ ನಿರ್ಮಿಸಿಕೊಟ್ಟಿರುವ ನನ್ನನ್ನೇ ಅಲ್ಲಿಂದ ಹೊರಹಾಕುವ ಪ್ರಯತ್ನ ನಡೆಯುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆಂದು ಅವರ ಆಪ್ತ ಮೂಲಗಳಿಂದ‌ ತಿಳಿದುಬಂದಿದೆ. ಫ್ಲೆಕ್ಸ್‌ನಲ್ಲಿ ತನ್ನ ಫೊಟೋ ಇಲ್ಲದಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.