ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಬೆಂಗಳೂರು, ಫೆ. 24 : ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆಯ ಕೂಗು ಜೋರಾಗಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಮೊದಲ ಬಾರಿ ಆಯ್ಕೆಯಾಗಿರುವ 31 ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. 2023ರ ಚುನಾವಣೆಯಲ್ಲಿ ಮೊದಲ ಬಾರಿಗೆ 38 ಯುವ ಶಾಸಕರು ಆಯ್ಕೆಯಾಗಿದ್ದು, ಇದು ಜನ ಬದಲಾವಣೆಯನ್ನು ಬಯಸಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

Advertisement

ಆದ್ದರಿಂದ, ಮುಂಬರುವ ಸಂಪುಟ ಪುನಾರಚನೆಯಲ್ಲಿ ಕನಿಷ್ಠ ಐವರು ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯುವ ನಾಯಕತ್ವಕ್ಕೆ ಆದ್ಯತೆ ನೀಡುವ ಮೂಲಕ 2028ರ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು ಎಂದು ಶಾಸಕರು ಈ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಬೆಳವಣಿಗೆಯು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಚರ್ಚೆಯ ಬೆನ್ನಲ್ಲೇ ನಡೆದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಪತ್ರಕ್ಕೆ ಸಹಿ ಹಾಕಿರುವ ಶಾಸಕರಾದ ಪ್ರದೀಪ್ ಈಶ್ವರ್, ಇಕ್ಬಾಲ್ ಹುಸೇನ್ ಮತ್ತು ಎ.ಎಸ್. ಪೊನ್ನಣ್ಣ ಅವರಂತಹ ನಾಯಕರು, “ಹೊಸಬರಿಗೆ ಅವಕಾಶ ನೀಡುವುದು ಈ ಕ್ಷಣದ ಅಗತ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬೆಂಗಳೂರಿಗೆ ಭೇಟಿ ನೀಡಿದ ಸಮಯದಲ್ಲಿಯೇ ಈ ‘ಪತ್ರ ಸ್ಫೋಟ’ ಸಂಭವಿಸಿರುವುದು ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿರುವುದನ್ನು ಸ್ಪಷ್ಟಪಡಿಸುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

⚠️ Contents are protected on this website.