ನೆರೆರಾಜ್ಯ ಆಂಧ್ರದಲ್ಲಿ ಮತ್ತೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಕೊರೊನಾ ಆತಂಕ : ಕಡಪದಲ್ಲಿ ಕೋವಿಡ್-19ಗೆ 2 ಬಲಿ !

ಆಂಧ್ರಪ್ರದೇಶ, ಜು. 13 : ಕೊರೊನಾ ಎಂಬ ಹೆಸರು ಕೇಳಿದರೆ ಸಾಕು ಇಡೀ ಜಗತ್ತೆ ಬೆಚ್ಚಿ ಬೀಳುತ್ತಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿತ್ತು. ಇದೀಗ ಮತ್ತೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿ ನಲುಗುವಂತೆ ಮಾಡಿದ್ದ ಕೊರೊನಾ ಹೆಮ್ಮಾರಿ ನಮ್ಮ ನೆರೆಯ ರಾಜ್ಯದಲ್ಲಿ ಮತ್ತೆ ಆತಂಕ ಹೆಚ್ಚಿಸಿದ್ದು, ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌-19 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

Advertisement

ರಾಜ್ಯದ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ರಾಜಂಪೇಟೆ ಮೂಲದ 52 ವರ್ಷದ ವ್ಯಕ್ತಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟ ಬಳಿಕ ವೆಲ್ಲೂರಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ, 43 ವರ್ಷದ ವ್ಯಕ್ತಿಯೊಬ್ಬರು ಆರೋಗ್ಯ ಸಮಸ್ಯೆಯಿಂದ ಕಡಪ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆನ್ನಲಾಗಿದೆ

ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಸದ್ಯ ಮನೆಯಲ್ಲೇ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಕಂಡು ಬಂದ ಪ್ರದೇಶಗಳಲ್ಲಿ ಸಾರ್ವಜನಿಕರಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಇದುವರೆಗೆ 18 ಮಾದರಿಗಳ ವರದಿ ನೆಗೆಟಿವ್‌ ಬಂದಿದ್ದು, ಉಳಿದ ವರದಿಗಾಗಿ ಕಾಯಲಾಗುತ್ತಿದೆ.

ರಾಜ್ಯಾದಂತ ಕಟ್ಟೆಚ್ಚರ ವಹಿಸಲು ಸೂಚನೆ!

ಪತ್ತೆಯಾದ ಎಲ್ಲಾ ನಾಲ್ಕು ಪ್ರಕರಣಗಳು ಕಡಪ ಜಿಲ್ಲೆಯಲ್ಲೇ ಆಗಿದೆ. ಇನ್ನು, ಕೋವಿಡ್‌ ಪಾಸಿಟಿವ್‌ ಎಂದು ಪತ್ತೆಯಾದ ಈ ಸೋಂಕಿತರಲ್ಲಿ ಎಲ್ಲರೂ ಕೋವಿಡ್-19‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದು, ಒಬ್ಬರು ಮಾತ್ರ ಬೂಸ್ಟರ್‌ ಡೋಸ್‌ ಅನ್ನು ಸಹ ಪಡೆದುಕೊಂಡಿದ್ದರು. ಸದ್ಯ ಸೋಂಕಿಗೆ ಕಾರಣವಾದ ಸೋಂಕಿಗೆ ಕಾರಣವಾದ ರೂಪಾಂತರವನ್ನು ನಿರ್ಧರಿಸಲು ಜೀನೋಮ್ ಅನುಕ್ರಮಕ್ಕಾಗಿ ಮೃತ ರೋಗಿಗಳ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (NIV) ಕಳುಹಿಸಲಾಗಿದೆ. ಆಸ್ಪತ್ರೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ ನೀಡಲಾಗಿದೆ. ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇರುವವರನ್ನು ತಕ್ಷಣ ಪರೀಕ್ಷೆಗೆ ಒಳಪಡಿಸಿ, ಅಗತ್ಯವಿದ್ದರೆ ಐಸೋಲೇಷನ್‌ಗೆ ಸ್ಥಳಾಂತರಿಸುವಂತೆ ಜಿಲ್ಲಾಡಳಿತವು ವೈದ್ಯಕೀಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.