ವಿಟ್ಲ : ಸೈಕಲ್ ನಿಂದ ಬಿದ್ದು ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು !

Advertisement

ವಿಟ್ಲ, ಮಾ. 07 : ಸೈಕಲ್ ನಿಂದ ಬಿದ್ದ ಬಾಲಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವರದಿಯಾಗಿದೆ. ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಆಸ್ಟ್ ಎಂಬವರ ಏಕೈಕ ಪುತ್ರ ಆಸೀಫ್ (11 ವ.) ಮೃತ ಬಾಲಕ ಎಂದು ಗುರುತಿಸಲಾಗಿದೆ.

Advertisement

ಆಸೀಫ್ ರವರು ಸ್ಥಳೀಯ ಮದರಸಾದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ತನ್ನ ಸೈಕಲ್‌ನಲ್ಲಿ ಹಿಂತಿರುಗುವ ಸಂದರ್ಭ ಪಂಜಿಗದ್ದೆ ಎಂಬಲ್ಲಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.

Advertisement

ಗಂಭೀರ ಗಾಯಗೊಂಡಿದ್ದ ಆಸೀಫ್ ರನ್ನು ತಕ್ಷಣವೇ ಸ್ಥಳೀಯರು ಚಿಕಿತ್ಸೆಗಾಗಿ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಆಸೀಫ್ ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ