ಕಾರ್ಕಳ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : ಅಪಾಯದಿಂದ ಪಾರಾದ ಮನೆಮಂದಿ

Advertisement

ಕಾರ್ಕಳ, ಜ. 16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಘಟನೆಯಿಂದಾಗಿ ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ

Advertisement

ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಳಗಾಗಿದೆ.

Advertisement

ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ