ಬೆಂಗಳೂರು : ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಗೆ ನಕಲಿ ಗನ್ ತೋರಿಸಿ ಬ್ಲ್ಯಾಕ್ ಮೇಲ್ – ಚಿನ್ನ ದರೋಡೆ

Advertisement

ಬೆಂಗಳೂರು, ಜು. 29 : ಬಾಲಕಿಯೊಬ್ಬಳು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿದ ಆಗಂತುಕರು ನಕಲಿ ಪಿಸ್ತೂಲ್ ತೋರಿಸಿ ನಗದು, ಚಿನ್ನಭಾರಣ ದೋಚಿ ಪರಾರಿಯಾಗಿದ್ದರು. ಸದ್ಯ ಇಬ್ಬರು ದರೋಡೆಕೋರರನ್ನು ಜೆ.ಜೆ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಚಾಮರಾಜಪೇಟೆ ನಿವಾಸಿ ಅಶ್ರಫ್ (22) ಮತ್ತು ಪಾದರಾಯನಪುರದ ಅಷ್ಟಲ್ ಅಲಿಯಾಸ್ ಡಿಚ್ಚಿ (32) ಬಂಧಿತ ಆರೋಪಿಗಳು. ಆರೋಪಿಗಳಿಂದ 25 ಲಕ್ಷ ರೂ. ಮೌಲ್ಯದ 139 ಗ್ರಾಂ ಚಿನ್ನಾಭರಣ, 8 ಲಕ್ಷ ರೂ. ನಗದು, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

Advertisement

ಆರೋಪಿಗಳು ಜುಲೈ 6 ರಂದು ಪಾದರಾಯನಪುರ 7ನೇ ಕ್ರಾಸ್‌ನಲ್ಲಿರುವ ಮನೆಗೆ ನುಗ್ಗಿ ದರೋಡೆ ಮಾಡಿದ್ದರು. ಪಾದರಾಯನಪುರದ 7ನೇ ಕ್ರಾಸ್ ನಲ್ಲಿರುವ ಕಟ್ಟಡವೊಂದರ 4ನೇ ಮಹಡಿ ಯಲ್ಲಿ ತಾಯಿ, ಮಗಳು ವಾಸವಾಗಿದ್ದರು. ಜುಲೈ 6ರಂದು ಕಾರ್ಯನಿಮಿತ್ತ ತಾಯಿ ಹೊರಹೋಗಿದ್ದರು. ಹೀಗಾಗಿ ಮನೆಯಲ್ಲಿ ಮಗಳು ಒಬ್ಬಳೇ ಇದ್ದಳು. ಈ ವೇಳೆ ಮನೆಗೆ ನುಗ್ಗಿದ ಆರೋಪಿಗಳು ನಕಲಿ ಪಿಸ್ತೂಲ್‌ನಿಂದ ಬಾಲಕಿಯ ತಲೆಗೆ ಹೊಡೆದು ಗಾಯಗೊಳಿಸಿದ್ದರು.

ಚಾಕುವಿನಿಂದ ಬೆದರಿಸಿ, ಕೊಠಡಿಯ ಬೀರುವಿನಲ್ಲಿಟ್ಟಿದ್ದ 199.71 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ರೂ. ನಗದು ದೋಚಿಕೊಂಡು ಪರಾರಿಯಾಗಿದ್ದರು. ತಾಯಿ ಮನಗೆ ಬಂದ ನಂತರ ದರೋಡೆ ಬಗ್ಗೆ ಬಾಲಕಿ ತಿಳಿಸಿದ್ದಾಳೆ. ನಂತರ ಅವರು ಪೊಲೀಸರಿಗೆ ದೂರು ನೀಡಿದರು. ಈ ಸಂಬಂಧ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ