ಬೆಳ್ತಂಗಡಿ: ಹೋರಿ ಹಾಯ್ದು ಗಾಯಗೊಂಡಿದ್ದ ವ್ಯಕ್ತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಪ್ರಕರಣ ದಾಖಲು

ಬೆಳ್ತಂಗಡಿ, ಮೇ. 21 : ಹೋರಿ ಹಾಯ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದಾರೆಂದು ಆರೋಪಿಸಿ ಮೃತರ ಕುಟುಂಬದವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.

Advertisement

ತಾಲೂಕಿನ ಗೇರುಕಟ್ಟೆ ನಿವಾಸಿ ಮೊಹಮ್ಮದ್ ಶರೀಫ್ (35) ಮೃತ ದುರ್ದೈವಿ.

ಮೇ 14ರಂದು ದೂರುದಾರರ ಸಹೋದರನಾದ ಮಹಮ್ಮದ್ ಶರೀಫ್ ಪಿ. ಎಂಬವರಿಗೆ, ಮನೆಯಲ್ಲಿದ್ದ ಹೋರಿ ಹಾಯ್ದು ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಗಾಯಾಳು ಮಹಮ್ಮದ್ ಶರೀಫ್ ರವರ ಅರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು, ಅವರನ್ನು ಮೇ 16ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮಹಮ್ಮದ್ ಶರೀಫ್‌ರವರು ಮೇ 20ರಂದು ಮೃತಪಟ್ಟಿರುತ್ತಾರೆ ಎಂಬುದಾಗಿ ಮೃತರ ಸಹೋದರ ಗೇರುಕಟ್ಟೆ ನಿವಾಸಿ ನಾಸಿರುದ್ದೀನ್.ಪಿ. ಬಿನ್ ಸೂಫಿ ಬ್ಯಾರಿ ಎಂಬುವವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನ ಅನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ : 28/2026, ಕಲಂ: 194(3) (iv)‌ ಬಿ.ಎನ್.ಎಸ್,ಎಸ್‌ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

ಈ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪಗಳನ್ನು ಪರಿಶೀಲಿಸಿ ವರದಿ ನೀಡುವ ಸಲುವಾಗಿ, ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಪತ್ರವ್ಯವಹಾರ ನಡೆಸಲಾಗಿದ್ದು, ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.