ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.15 ರಿಂದ 20ರವರೆಗೆ ಲಕ್ಷ ದೀಪೋತ್ಸವ

Advertisement

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ವಾರ್ಷಿಕ ಲಕ್ಷದೀಪೋತ್ಸವವು ನವೆಂಬರ್ 15ರಂದು ಆರಂಭಗೊಂಡು ನ.20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜ್ರಂಭಣೆಯಿಂದ ನಡೆಯಲಿದೆ. ನ. 15ರಂದು ಬೆಳಗ್ಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಗೊಳ್ಳಲಿದೆ. ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ, ನ.16ರಂದು ಕೆರೆಕಟ್ಟೆ ಉತ್ಸವ, ನ.18ರಂದು ಕಂಚಿಮಾರುಕಟ್ಟೆ ಉತ್ಸವ, ನ.19ರಂದು ಗೌರಿಮಾರುಕಟ್ಟೆ ಉತ್ಸವ, ನ. 20ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ಜರುಗಲಿದೆ.

Advertisement

ನ. 15ರಂದು ಸಂಜೆ ಭಕ್ತಾದಿಗಳಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆಯ ಪಾದಯಾತ್ರೆ ನಡೆಯಲಿದೆ. ನ. 17ರಂದು ಲಲಿತೋದ್ಯಾನ ಉತ್ಸವ ಹಾಗೂ ಆಮೃತವರ್ಷಿಣಿ ಸಭಾಭವನದಲ್ಲಿ ಲಲಿತಕಲಾಗೋಷ್ಠಿ ನಡೆಯಲಿದೆ. ನ.18ರಂದು ಸರ್ವಧರ್ಮ ಸಮ್ಮೇಳನ, ನ.19ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ನವೆಂಬರ್ 20ರಂದು ಲಕ್ಷ ದೀಪೋತ್ಸವ ಸಮಾಪನಗೊಳ್ಳಲಿದೆ. ದೇಶದಾದ್ಯಂತದಿಂದ ಲಕ್ಷಾಂತರ ಭಕ್ತ ಸಮೂಹವೇ ಶ್ರೀ ಕ್ಷೇತ್ರದ ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ