ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ  74 ಅಸಹಜ ಸಾವು – ಪ್ರಕರಣದ ತನಿಖಾ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು, ಮಾ. 19 : ಧರ್ಮಸ್ಥಳದಲ್ಲಿ 1990 ರಿಂದ 2021 ರ ನಡುವೆ ನಡೆದಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್‌, ರಾಜ್ಯ ಸರಕಾರಕ್ಕೆ ಬುಧವಾರ ನಿರ್ದೇಶಿಸಿದೆ.

ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸಿಜೆ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, 74 ಪ್ರಕರಣಗಳ ಸಂಬಂಧ ನಡೆಸಿರುವ ತನಿಖಾ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜು.7ಕ್ಕೆ ಮುಂದೂಡಿತು.

ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ”ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ನಡೆದಿವೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಯುಡಿಆರ್‌ ದಾಖಲಿಸಲಾಗಿದೆ. ಸದ್ಯ ರಚಿಸಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂಥದ್ದು ಏನೂ ಇಲ್ಲ. ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ ಅದನ್ನು ತನಿಖೆಗೆ ಒಳಪಡಿಸಲಾಗುವುದು. ಅರ್ಜಿದಾರರ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿದೆ,” ಎಂದರು.

74 ಪ್ರಕರಣಗಳಲ್ಲಿ ಪಂಚನಾಮೆ ನಡೆಸಿಲ್ಲ – ವಕೀಲ ಎಸ್‌.ಬಾಲನ್‌

Advertisement

ಅರ್ಜಿದಾರರ ಪರ ವಕೀಲ ಎಸ್‌.ಬಾಲನ್‌, ”ಅಸಹಜವಾಗಿ ಸಾವನ್ನಪ್ಪಿದವರ ಪಟ್ಟಿಯನ್ನು ನ್ಯಾಯಾಲಯದ ಮುಂದಿಡಲಾಗಿದೆ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಅಸಹಜವಾಗಿ ಸಾವನ್ನಪ್ಪಿದವರ 74 ಪ್ರಕರಣಗಳಲ್ಲಿ ಪಂಚನಾಮೆ ನಡೆಸಿಲ್ಲ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬ ಮಾಹಿತಿ ಇಲ್ಲ. ಈ ಸಂಬಂಧ ಎಲ್ಲಾದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿತನಿಖೆ ನಡೆಸಿಲ್ಲ. ಶವಗಳನ್ನು ಸಂಸ್ಕಾರ ಮಾಡಲಾಗಿದೆ. ಆದರೆ, ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆದಿಲ್ಲ. ಹೊಸದಾಗಿ 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕೆಂಬುದು ಅರ್ಜಿದಾರರ ಕೋರಿಕೆಯಾಗಿದೆ,” ಎಂದರು.

ಅದಕ್ಕೆ ಎಜಿ, ”ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದಿಡಲಾಗುವುದು. ತನಿಖೆಯ ವಿವರ, ಏನು ಮಾಡಲಾಗಿದೆ ಎಂಬ ಕುರಿತು ವಿಸ್ತೃತವಾದ ಆಕ್ಷೇಪಣೆ ಸಲ್ಲಿಸಲಾಗುವುದು,” ಎಂದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.