ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಬೆಂಬಲವಾಗಿ 200 ಸ್ವಾಮೀಜಿಗಳು ಸೇರಿ 1 ಲಕ್ಷ ಮಂದಿಯ ಭಕ್ತ ಸಂಗಮ – ಪ್ರಣವಾನಂದರಾಮ್ ಮಹಾಸ್ವಾಮಿ

ಧರ್ಮಸ್ಥಳ, ಜು. 9 : ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಷಡ್ಯಂತ್ರ ಕರ್ನಾಟಕದಲ್ಲಿ ನಡೆಯುತ್ತಿದ್ದು ಹಾಗಾಗಿ ಪೂಜ್ಯರೊಂದಿಗೆ ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿ ರಾಜ್ಯಾಧಕ್ಷ ಪ್ರಣವಾನಂದರಾಮ್ ಮಹಾಸ್ವಾಮಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದರು.

Advertisement

ಅವರು ಜು. 10 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ್ ಸ್ವಾಮಿ ದರ್ಶನ ಪಡೆದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅವರನ್ನು ಸನ್ಮಾನಿಸಿದರು.

ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸನಾತನ ಧರ್ಮದ ಮೇಲೆ ಈ ಹಿಂದೆಯೂ ದಾಳಿ ನಡೆದಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಪರ ಬೆಂಬಲ ಇದ್ದೇವೆ ಎಂಬುವುದನ್ನು ತಿಳಿಸುವುದಕ್ಕೆ ಬಂದಿದ್ದೇವೆ. 200 ಸ್ವಾಮೀಜಿಗಳು ಸೇರಿ 1 ಲಕ್ಷ ಮಂದಿಯ ಭಕ್ತ ಸಂಗಮವನ್ನು ಮಾಡುತ್ತೇವೆ. ಇದರ ಹಿಂದೆ ಇರುವ ದುಷ್ಟ ಶಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂಬುವುದಾಗಿ ಮುಖ್ಯ ಮಂತ್ರಿಗಳಿಗೆ ಆಗ್ರಹಿಸಿದರು.

ಭಾರತದ ಆಧ್ಯಾತ್ಮಿಕ ಕೇಂದ್ರಗಳಲ್ಲಿ ತುಂಬಾ ಪ್ರಸಿದ್ಧಿಯನ್ನು ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವುದು ನಮಗೆಲ್ಲರಿಗೂ ಗೊತ್ತಿರುವ ವಿಷಯ. ಇವೆಲ್ಲವೂ ಸತ್ಯಕ್ಕೆ ದೂರವಾದ ಆರೋಪಗಳು ಆದ ಹಿನ್ನಲೆಯಲ್ಲಿ ದಿನಾಂಕ: 27/28-ಜೂನ್ 2026 ರಂದು ಕಲ್ಬುರ್ಗಿಯಲ್ಲಿ ನಡೆದ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ಚಿಂತನ ಶಿಬಿರದಲ್ಲಿ 50ಕ್ಕೂ ಹೆಚ್ಚು ಅತಿ ಹಿಂದುಳಿದ ಸಮುದಾಯದ ಸ್ವಾಮೀಜಿಗಳು ಒಮ್ಮತದಿಂದ ಧರ್ಮಸ್ಥಳದ ಪರವಾಗಿ ನಿಲ್ಲಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ತೆಗೆದುಕೊಂಡ ನಿರ್ಣಯದಂತೆ ಈ ಬೆಂಬಲ ಪತ್ರವನ್ನು ಮಹಾಸಭೆಯಿಂದ ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಗೆ ಸಮರ್ಪಣೆ ಮಾಡುತ್ತೇವೆ. ನಾವೆಲ್ಲಾ ಅತಿ ಹಿಂದುಳಿದ ಸಮುದಾಯಗಳು ಕ್ಷೇತ್ರದ ಪರವಾಗಿ ಪ್ರಾಮಾಣಿಕವಾಗಿ ಇರುತ್ತೇವೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಈ ಪತ್ರದ ಮುಖಾಂತರ ತಿಳಿಸಲು ಬಯಸುತ್ತೇವೆ ಎಂದು ತಿಳಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.